ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಕಾಂಗ್ರೇಸ್ ನ್ಯಾಯ ಒದಗಿಸಿದೆ: ಕೆ.ಎಚ್. ಮುನಿಯಪ್ಪ
ಬೀದರ್: ಕೇಂದ್ರದಲ್ಲಿ ಅಕ್ಕಿ ದಾಸ್ತಾನು ಇದ್ದರೂ ಎನ್.ಡಿ.ಎ. ಮೈತ್ರಿಕೂಟದ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದುರುದ್ದೇಶದಿಂದ ರಾಜ್ಯ ಸರ್ಕಾರಕ್ಕೆ ಅಕ್ಕಿ ಕೊಡಲಿಲ್ಲ. ಬಡವರ ಹಸಿವು ನೀಗಿಸುವುದು ಸಂವಿಧಾನ ಬದ್ಧ ಹಕ್ಕು. ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡಲಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,
ಮಾದಿಗರಿಗೆ ಒಳ ಮೀಸಲಾತಿ ನೀಡುತ್ತೇವೆ ಎಂದು ಹೇಳುವ ಮೋದಿಯವರು ಹತ್ತು ವರ್ಷ ಏಕೆ ನೀಡಲಿಲ್ಲ? ಇದೊಂದು ಚುನಾವಣಾ ಗಿಮಿಕ್ ಎಂದರಲ್ಲದೆ ನುಡಿದಂತೆ ನಡೆಯುವ ಸರ್ಕಾರ ಕಾಂಗ್ರೇಸ್ ಒಂದೆ. ಗ್ಯಾರಂಟಿಗಳನ್ನು ಸಮರ್ಥವಾಗಿ ಜಾರಿಗೆ ತಂದು ಜನಪರ ಜೀವಪರವಾಗಿ ಸರ್ಕಾರ ನಡೆಸುತಿದ್ದೇವೆ. ಸಾಲಮನ್ನಾ, ಬಿಪಿಎಲ್ ಕಾರ್ಡ್ ಇರುವ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ಹಣ ನೀಡುವುದು, ಉದ್ಯೋಗ ಭರ್ತಿ ಸೇರಿದಂತೆ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಿಕೊಡುವ ಪ್ರಯತ್ನ ಮಾಡುತಿದ್ದೇವೆ ಎಂದು ಮುನಿಯಪ್ಪ ತಿಳಿಸಿದರು.
ರಾಜ್ಯದಲ್ಲಿ 28 ಸ್ಥಾನಗಳಲ್ಲಿ ಗೆಲ್ಲುವ ಭರವಸೆ ಇದೆ ಎಂದು ತಿಳಿಸಿದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಪ್ರಮುಖರಾದ ಬಸವರಾಜ ಬುಳ್ಳಾ, ವಿಜಯಕುಮಾರ್ ರಾಮಕೃಷ್ಣ, ವಿದ್ಯಾಸಾಗರ ಶಿಂಧೆ, ಸಂಜೀವಕುಮಾರ ಡಿ.ಕೆ, ಪಕ್ಷದ ಜಿಲ್ಲಾ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.