2 ನೇ ಸುತ್ತಿನ ತರಬೇತಿ ಕಾರ್ಯಕ್ರಮ
ಗದಗ ಮೇ.2: ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲೆಯ ಗದಗ, ಶಿರಹಟ್ಟಿ, ರೋಣ ಮತ್ತು ನರಗುಂದದಲ್ಲಿ 2 ನೇ ಸುತ್ತಿನ ತರಬೇತಿ ಕಾರ್ಯಾಗಾರವು ನಡೆಯಿತು.
ವಿದ್ಯುನ್ಮಾನ ಮತಯಂತ್ರಗಳ ನಿರ್ವಹಣೆ , ಅಣುಕು ಮತದಾನ , ಮತ್ತಿತರ ಸಂಬಂಧ ಮತಗಟ್ಟೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಜೊತೆಗೆ ಚುನಾವಣಾ ಪಾವಿತ್ರ್ಯತೆ ಕಾಪಾಡಬೇಕು ಎಂದು ಹೇಳಿದರು.
ಮತಗಟ್ಟೆ ಅಧಿಕಾರಿಗಳು ಅಣುಕು ಮತದಾನ, ಪ್ರಮಾಣ ಪತ್ರ ಬರೆಯುವುದು, ಇವಿಎಂ, ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್, ಹಾಗೂ ವಿವಿ ಪ್ಯಾಟ್ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದರು.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು, ತಹಶೀಲ್ದಾರರು, ಸೆಕ್ಟರ್ ಅಧಿಕಾರಿಗಳು, ಪಿಆರೊ, ಎಪಿಆರೊ, ಇತರರು ಇದ್ದರು.