ವಿದ್ಯಾರ್ಥಿಗಳು ತರಬೇತಿಯನ್ನು ನಿರಂತರವಾಗಿ ಅಭ್ಯಾಸ ಮಾಡಬೇಕು: ಸುಜಯ್ ಕುಮಾರ್
ಸಂಜೆವಾಣಿ ವಾರ್ತೆ
ಶ್ರೀರಂಗಪಟ್ಟಣ: ಮೇ.02:- ಅಚೀವರ್ಸ್ ಅಕಾಡೆಮಿ ಶ್ರೀರಂಗಪಟ್ಟಣ ಇವರ ವತಿಯಿಂದ ಉಚಿತ ಕ್ರೀಡಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗಾಂಧಿವಾದಿ ಡಾ.ಸುಜಯ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ನಿರಂತರವಾಗಿ ಪಾಲ್ಗೊಂಡರೆ ಯಾವುದೇ ರೀತಿಯ ಆಸ್ಪತ್ರೆಗೆ ಹೋಗುವಂತ ಪ್ರಮೇಯ ಬರುವುದಿಲ್ಲ.ವಿದ್ಯಾರ್ಥಿಗಳು ಮುಂದೆಯೂ ಕೂಡ ತರಬೇತಿ
ಯನ್ನು ನಿರಂತರವಾಗಿ ಅಭ್ಯಾಸ ಮಾಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು
ಪ್ರಾಸ್ತಾವಿಕ ನುಡಿಯಲ್ಲಿ ಅಚಿವರ್ಸ್ ಅಕಾಡೆಮಿಯ ಮುಖ್ಯಸ್ಥ ಡಾ.ರಾಘವೇಂದ್ರ ಮಾತನಾಡಿ, ಬೇಸಿಗೆ ಕ್ರೀಡಾ ಶಿಬಿರವು ಒಂದು ತಿಂಗಳು ನಡೆಯಿತು.ಮುಖ್ಯವಾಗಿ ಕ್ರೀಡಾ ಶಿಬಿರದ ಉದ್ದೇಶ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿದ್ದೇವೆ. ಅಂತಹ ವಿದ್ಯಾರ್ಥಿಗಳಿಗೆ ಇನ್ನು ಉತ್ತಮವಾದ ತರಬೇತಿಯನ್ನು ನೀಡಿ ರಾಜ್ಯ,ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ಹಂಬಲದೊಂದಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತವಾಗಿ ಈ ಶಿಬಿರವನ್ನು ಆಯೋಜನೆ ಮಾಡಲಾಯಿತು.
ಇನ್ನುಂದೆ ಪ್ರತೀ ನಿತ್ಯವೂ ಸಹ ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಬೆಳಿಗ್ಗೆ ಮತ್ತು ಸಾಯಂಕಾಲ ಉಚಿತವಾಗಿ ಕ್ರೀಡಾ ತರಬೇತಿ ನೀಡಲಾಗುತ್ತದೆ. ಆಸಕ್ತಿ ಇರುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.
ಪುರಸಭೆ ಮಾಜಿ ಸದಸ್ಯೆ ಕಾವೇರಮ್ಮ ಶೇಷಾದ್ರಿ ಮಾತನಾಡಿ, ಎಲ್ಲಾ ಕ್ರೀಡಾಪಟುಗಳಿಗೆ ಮುಂದಿನ ದಿನಗಳಲ್ಲಿ ನಿರಂತರ ತರಬೇತಿ ಪಡೆದುಕೊಂಡು ನಮ್ಮ ತಾಲೂಕು ಜಿಲ್ಲೆಗೆ, ರಾಜ್ಯಕ್ಕೆ ಹಾಗೂ ದೇಶಕ್ಕೆ ಹೆಸರನ್ನು ತರಬೇಕೆಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಪರಿವರ್ತನ ಶಾಲೆಯ ವ್ಯವಸ್ಥಾಪಕ ನಿರ್ದೇಶಕ ಮಂಜುರಾಂ, ಅಚೀವರ್ಸ್ ಅಕಾಡೆಮಿಯ ನಿರ್ದೇಶಕರಾದ ಗುರು, ರಾಹುಲ್ ,ಆಕ್ಸ್ ಫರ್ಡ್ ಶಾಲೆಯ ದೈಹಿಕ ಶಿಕ್ಷಕ ಮನು ಸೇರಿದಂತೆ ಪೆÇೀಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.