ಕಾರ್ಮಿಕ ದಿನಾಚರಣೆ
ಲಕ್ಷ್ಮೇಶ್ವರ,ಮೇ.2:ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಮೇ 1ರಂದು ಕಾರ್ಮಿಕ ದಿನಾಚರಣೆಯ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಭರವಸೆ ಯೋಜನೆಯ ಕಾರ್ಮಿಕರೊಂದಿಗೆ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷರಾದ ಬಸವರಾಜ ಅರ್ಕಸಾಲಿಯವರು ಮಾತನಾಡಿ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು ಮಾಸಾಶನ ಉದ್ಯೋಗ ಆರೋಗ್ಯ ಮತ್ತು ವಸತಿ ಯೋಜನೆಗಳಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದರು ಕಾರ್ಮಿಕರು ಪರಸ್ಪರ ಸಿಹಿ ತಿನಿಸಿ ಕಾರ್ಮಿಕ ದಿನಾಚರಣೆಯನ್ನು ಆಚರಿಸಿದರು.