ಸಿವಿಲ್ ಇಂಜಿನಿಯರ್ ಬಂಧನ
ಸಂಜೆವಾಣಿ ನ್ಯೂಸ್
ಮೈಸೂರು: ಮೇ.02:- ಐಪಿಎಲ್ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡು ಮಾಡಿದ್ದ ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಇದೀಗ ಕುವೆಂಪುನಗರ ಠಾಣೆ ಪೆÇಲೀಸರ ಅತಿಥಿಯಾಗಿದ್ದಾನೆ.
ಮಂಡ್ಯ ಜಿಲ್ಲೆ ಗೆಂಡೆಕೊಪ್ಪಲು ಗ್ರಾಮದ ಕೇಶವ (26) ಬಂಧಿತ ಆರೋಪಿಯಾಗಿದ್ದು ಈತನಿಂದ 1.20 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.
ಬಿಇ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿರುವ ಕೇಶವ ಕಳೆದ ಮೂರು ವರ್ಷಗಳಿಂದ ಐಪಿಎಲ್ ಬೆಟ್ಟಿಂಗ್ ದಂಧೆಗೆ ದಾಸನಾಗಿ 3 ಲಕ್ಷ ಹಣ ಕಳೆದುಕೊಂಡಿದ್ದ. ಸಾಲ ಹೆಚ್ಚಾದ ಹಿನ್ನಲೆ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದಿದ್ದ. ಕುವೆಂಪುನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳುವು ಮಾಡಿ ಸಿಕ್ಕಿಬಿದ್ದ ಕೇಶವ ನಿಂದ ಸಧ್ಯ ಪೆÇಲೀಸರು 2 ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಈ ಹಿಂದೆ ಈತ ವಿವಿದ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನ ಕಳುವು ಮಾಡಿದ 8 ಪ್ರಕರಣಗಳಿವೆ.ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರೂ ಐಪಿಎಲ್ ಬೆಟ್ಟಿಂಗ್ ಹುಚ್ಚಿನಿಂದ ದಾರಿತಪ್ಪಿ ಇದೀಗ ಬೈಕ್ ಕಳ್ಳನಾಗಿರುವ ಕೇಶವ ಜೈಲು ಕಂಬಿ ಎಣಿಸುತ್ತಿದ್ದಾನೆ.
ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೆಆರ್ ವಿಭಾಗದ ಎಸಿಪಿ ರಮೇಶ್ ಕುಮಾರ್ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಯೋಗೇಶ್ ಹಾಗೂ ಪಿಎಸ್ಸೈ ಗೋಪಾಲ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಂಜುನಾಥ್, ಆನಂದ್, ಹಜರತ್ ಆಲಿ, ಸುರೇಶ್ ಹಾಗೂ ನಾಗೇಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.
ನಗರ ಪೆÇಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ರವರು ಯಶಸ್ವಿ ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ.