ನಿವೃತ್ತರಿಗೆ ಸನ್ಮಾನ
ಹುಬ್ಬಳ್ಳಿ,ಮೇ1: ಶಹರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಕಾರನಗರ ಶಾಲೆಯ ಶಿಕ್ಷಕಿಯಾದ ಶ್ರೀಮತಿ ನಾಗವೇಣಿ ಜೋಶಿ ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಕ್ಷೇತ್ರ ಶಿಕ್ಷಣಾಧಿಕಾರಗಳ ಪರವಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರು ಅವರನ್ನು ಸನ್ಮಾನಿಸಿ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಿದರು.
ಮಕ್ಕಳ ಶ್ರೇಯೋಭಿವೃದ್ಧಿಗಾಗಿ, ಗುಣಾತ್ಮಕ ಶಿಕ್ಷಣಕ್ಕಾಗಿ ಹಾಗೂ ಸಮಾಜದ ಹಿತಕ್ಕಾಗಿ ಸರ್ಕಾರ ಹಾಗೂ ಇಲಾಖೆಯ ನಿರ್ದೇಶನದಂತೆ ಹಗಲಿರುಳು ಶ್ರಮಿಸಿ ಇತರರಿಗೆ ಮಾರ್ಗದರ್ಶಿಯಾಗಿದ್ದಾರೆ. ಶಿಕ್ಷಕ ಹುದ್ದೆಯ ಘನತೆಯನ್ನು ಹೆಚ್ಚಿಸಿ,ವಿದ್ಯಾರ್ಥಿಗಳ ಭವ್ಯ ಭವಿಷ್ಯ ನಿರ್ಮಾಣ ಮಾಡುವುದರಲ್ಲಿ 28 ವರ್ಷ 4 ತಿಂಗಳು ಅನುಪಮ ಸೇವೆ ಸಲ್ಲಿಸಿದ್ದಾರೆ. ಅವರ ನಿವೃತ್ತಿಯ ಜೀವನ ಹಾಗೂ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.