ಕಾನೂನಿನ ಚೌಕಟ್ಟಿನಲ್ಲಿ ಪ್ರಧಾನಿ ಮೊಮ್ಮಗ ಆಗಿದ್ದರು ತಪ್ಪು ಮಾಡಿದವರಿಗೆ ಶಿಕ್ಷೆ: ಸಿ.ಎಸ್.ಪುಟ್ಟರಾಜು
ಸಂಜೆವಾಣಿ ವಾರ್ತೆ
ಮಂಡ್ಯ: ಮೇ.01:- ತಾಲೂಕಿನ ದುದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಡಿ.ಬಿ.ಚೌಡೇಶ್ ಅಧ್ಯಕ್ಷರಾಗಿ, ಇಂದ್ರಮ್ಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
11ಮಂದಿ ಸದಸ್ಯ ಬಲವುಳ್ಳ ಸೊಸೈಟಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚೌಡೇಶ್ ಹಾಗೂ ಇಂದ್ರಮ್ಮ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಸಹಕಾರ ಇಲಾಖೆಯ ಅಧಿಕಾರಿ ರವಿ ಅವರು ಇವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್.ಪುಟ್ಟರಾಜು ಅವರು ಮಂಡ್ಯದ ಬಂದೀಗೌಡ ಬಡಾವಣೆಯ ನಿವಾಸದಲ್ಲಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ನಿರ್ದೇಶಕರನ್ನು ಅಭಿನಂದಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ದುದ್ದ ಹೋಬಳಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಅವಿರೋಧ
ವಾಗಿ ಆಯ್ಕೆಯಾಗಿದ್ದಾರೆ ಅದೇ ರೀತಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ.ಶೇಕಡಾ 95 ರಷ್ಟು ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಶಿಸ್ತಿನ ಸಿಪಾಯಿಗಳ ರೀತಿ ತಮ್ಮ ಶಕ್ತಿ ಮೀರಿಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ ಅವರಿಗೂ ಅಭಿನಂದನೆ ಸಲ್ಲಿಸಿಸುವುದಾಗಿ ತಿಳಿಸಿದರು.
ಕುಮಾರಸ್ವಾಮಿರವರು ಮಾಡಿದ್ದ ಜನಪ್ರಿಯ ಕಾರ್ಯಕ್ರಮಗಳನ್ನು ನೆನೆದು ಪಕ್ಷಾತೀತವಾಗಿ ವಿಶೇಷವಾಗಿ ಮಹಿಳೆಯರು ಆಶೀರ್ವಾದ ಮಾಡಿದ್ದಾರೆ ಎಂದರು.
ಇನ್ನು ಪ್ರಜ್ವಲ್ ರೇವಣ್ಣ ರವರ ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ , ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‍ಐಟಿ ತನಿಖಾ ಸಂಸ್ಥೆಗೆ ನೀಡ್ದಿದಾರೆ ಸತ್ಯ ಸತ್ಯತೆ ಶೀಘ್ರದಲ್ಲೇ ಹೊರ ಬೀಳಲಿದೆ ,ನಮ್ಮ ಪಕ್ಷ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಡಿಪಡಿಸುವುದಿಲ್ಲ ಎಸ್‍ಐಟಿ ತನಿಖಾ ಸಂಸ್ಥೆಗೆ ಸಹಕಾರ ನೀಡುತ್ತೇವೆ ಅದರಂತೆ ಪ್ರಜ್ವಲ್ ರೇವಣ್ಣ ಅವರಿಗೆ ಪಕ್ಷದ ವತಿಯಿಂದ ಶಿಸ್ತಿನ ಕ್ರಮ ತೆಗೆದುಕೊಂಡಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಪ್ರಧಾನಿ ಮೊಮ್ಮಗ ಆಗಿದ್ದರು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು,ಹೆಣ್ಣು ಮಕ್ಕಳ ವಿಡಿಯೋ ಹರಿ ಬಿಟ್ಟವರಿಗೂ ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಗುರುಪ್ರಸಾದ್ , ಎನ್.ಬಿ.ರವಿ , ಡಿ.ಜೆ.ರಮೇಶ್ , ಮಹದೇವಪ್ಪ , ಶಿವಮಾದಪ್ಪ , ಶಶಿಕಲಾ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್.ಎ. ಮಲ್ಲೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೇಯಶ್ ಗೌಡ , ಮುಖಂಡರಾದ ಡಿ.ಮಹೇಶ್ , ಮಂಜಯ್ಯ, ಲೋಕೇಶ್ ,ಬಸವ ಲಿಂಗಪ್ಪ ,ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.