ವಕೀಲ ಕರ್ಸೆ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ : ವಕೀಲರ ಪ್ರತಿಭಟನೆ
ಬೀದರ್,ಮೇ.1:ನ್ಯಾಯವಾದಿ ಬಿ.ಸಿ.ಕರ್ಸೆ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಖಂಡಿಸಿ ಸೋಮವಾರ ಜಿಲ್ಲಾ ವಕೀಲರ ಸಂಘ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದೆ.
ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪಾ ಪಾಟೀಲ್ (ಪುಟ್ಟು) ನೇತೃತ್ವದಲ್ಲಿ ನ್ಯಾಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಬಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ನ್ಯಾಯವಾದಿ ಬಿ.ಸಿ.ಕಸೆರ್É ಅವರು ಕೆಎಚ್‍ಬಿ ಕಾಲೋನಿಯಲ್ಲಿ ಹೋಗುತ್ತಿದ್ದಾಗ ಕಾರ್‍ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕಸೆರ್É ಮುಖಕ್ಕೆ ಖಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ನ್ಯಾಯವಾದಿ ಕಸೆರ್É ಅವರಿಗೆ ರಕ್ಷಣೆ ನೀಡಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪಾ ಪಾಟೀಲ್ ಒತ್ತಾಯಿಸಿದ್ದಾರೆ.
ಉಪಾಧ್ಯಕ್ಷ ಗುಂಡರೆಡ್ಡಿ ಗುಡಾಡಿ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದರ್, ಜಂಟಿ ಕಾರ್ಯದರ್ಶಿ ಶಿಲ್ಪಾ ಪಾಟೀಲ್, ಪ್ಯಾರುಸಾಬ್ ಎಂ.ಶೇಖ್ ಮತ್ತಿತ್ತರರು ಭಾಗವಹಿಸಿದರು.