ರಾಜ್ಯದ ಸಣ್ಣ ಕೈಗಾರಿಕೆ ಸಚಿವರ ಪ್ರವಾಸ
ಕಲಬುರಗಿ:ಸೆ.21:ರಾಜ್ಯದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರು ಇದೇ ಸೆಪ್ಟೆಂಬರ್ 22 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕಲಬುರಗಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸಚಿವರು ಸೆಪ್ಟೆಂಬರ್ 23, 24 ಹಾಗೂ 25 ರಂದು ಯಾದಗಿರಿ ಹಾಗೂ ಶಹಾಪೂರಗಳಲ್ಲಿ ನಿಗದಿಪಡಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.