ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಸೆ.21:ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಮುನಿರಾಬಾದ್‍ದಿಂದ ರಸ್ತೆ ಮೂಲಕ ಸೆಪ್ಟೆಂಬರ್ 22 ರಂದು ಭಾನುವಾರ ಸಂಜೆ 7 ಗಂಟೆಗೆ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 23 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಸುಲೇಪೇಟ್‍ದಲ್ಲಿ ಸೇಡಂ ವಿಧಾನಸಭಾ ಮತಕ್ಷೇತ್ರದ 2023-24ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ವಾರ್ಡ್ ನಂ. 1 ರಿಂದ 5 ಮತ್ತು ಯಾಕಾಪುರ ಗ್ರಾಮದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಅಂದು ಬೆಳಿಗ್ಗೆ 11.30 ಗಂಟೆಗೆ ಸುಲೇಪೇಟ್‍ದಲ್ಲಿ ಸೇಡಂ ವಿಧಾನಸಭಾ ಮತಕ್ಷೇತ್ರದ 2022-23ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಮೆಗಾ ಮೈಕ್ರೋ ಯೋಜನೆಯಡಿ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಸುಲೇಪೇಟ್‍ದಲ್ಲಿ 2023-24ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಮೈಕ್ರೋ ಯೋಜನೆಯಡಿ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಹೆಚ್.ಪಿ.ಎಸ್. ಶಾಲೆಯ ಎರಡು ಕೋಣೆಗಳ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ಸುಲೇಪೇಟ್‍ದಲ್ಲಿ ಸೇಡಂ ವಿಧಾನಸಭಾ ಮತಕ್ಷೇತ್ರದ 2023-24ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಅಕ್ಷರ ಅವಿಷ್ಕಾರ್ ಯೋಜನೆಯಡಿ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದ ಸರ್ಕಾರಿ ಉರ್ದು ಹೈಸ್ಕೂಲ್‍ನ 2 ಕೋಣೆಗಳ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.
ಅಂದು ಮಧ್ಯಾಹ್ನ 3 ಗಂಟೆಗೆ ಸೇಡಂ ಪಟ್ಟಣದ ಬಸವನಗರದಲ್ಲಿ 2023-24ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಅಕ್ಷರ ಅವಿಷ್ಕಾರ ಯೋಜನೆಯಡಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ 6 ಕೋಣೆಗಳ ನಿರ್ಮಾಣ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿ, ನಂತರ ಕಲಬುರಗಿಗೆ ಆಗಮಿಸಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 24 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಸೇಡಂ ತಾಲೂಕಿನ ಮುಧೋಳದಲ್ಲಿ 2019-20ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ ಸೇಡಂ ತಾಲೂಕಿನ ಮುಧೋಳ ಕೆ.ಪಿ.ಎಸ್. ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸುವ ಕಾಮಗಾರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಕ್ವಾಟರ್ಸ್ ನಿರ್ಮಾಣ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ನಾಡೇಪಲ್ಲಿಯಲ್ಲಿ ನಾಡೇಪಲ್ಲಿ ಗ್ರಾಮದಿಂದ ವಾಲ್ಯಾನಾಯಕ ತಾಂಡಾದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೇದಕಲ್ಲಿ 2023-24ನೇ ಸಾಲಿನ ಅಪೆಂಡಿಕ್ಸ್-ಇ ಯೋಜನೆಯಡಿ ಸೇಡಂ ತಾಲೂಕಿನ ಸಿಂದಗಿ-ಕೊಡಂಗಲ್ ರಸ್ತೆ ರಾಜ್ಯ ಹೆದ್ದಾರಿ-16 ಕಿ.ಮೀ. ನವೀಕರಣ ಕಾಮಗಾರಿ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 4.30 ಗಂಟೆಗೆ ಬೊಂದೆಂಪಲ್ಲಿಯಲ್ಲಿ 2023-24ನೇ ಸಾಲಿನ ಕೆ.ಕೆ.ಆರ್.ಡಿ.ಬಿ. ಮೈಕ್ರೋ (ಎಸ್.ಸಿ.ಪಿ.) ಯೋಜನೆಯಡಿ ಸೇಡಂ ತಾಲೂಕಿನ ಬೊಂದೆಂಪಲ್ಲಿ ಗ್ರಾಮದಿಂದ ವೆಂಕಟಾಪೂರ ತಾಂಡಾದವರೆಗೆ ರಸ್ತೆ ಸುಧಾರಣೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಬೊಂದೆಂಪಲ್ಲಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಸೇಡಂ ತಾಲೂಕಿನ ಬೊಂದೆಂಪಲ್ಲಿ ಗ್ರಾಮದ ನರಸಪ್ಪ ಬೊಂದೆಂಪಲ್ಲಿ ಕೆರೆ ಸುಧಾರಣಾ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸುವರು.
ಸೆಪ್ಟೆಂಬರ್ 25 ರಂದು ಬುಧವಾರ ಕಲಬುರಗಿ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು. ಸೆಪ್ಟೆಂಬರ್ 26 ರಂದು ಗುರುವಾರ ಬೆಳಿಗ್ಗೆ 9.45 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.