ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಪ್ರತಿಭಟನೆ
ಕಲಬುರಗಿ,ಸೆ.21-ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಹಿಂಸೆಯನ್ನು ತಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.
ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಂಚಾಲಕಿ ಶಾಂತಾ ಘಂಟೆ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖಂಡರಾದ ಎಂ.ಬಿ.ಸಜ್ಜನ್, ನಾಗಯ್ಯ ಸ್ವಾಮಿ, ಯಶ್ವಂತ ಪಾಟೀಲ, ಶಿವು ಹೋಟ್ಕರ್, ವಿಜಯಲಕ್ಷ್ಮೀ, ಗೌರಮ್ಮ ಪಾಟೀಲ, ರತ್ನಮ್ಮ, ಶೇಖಮ್ಮ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.