ಜಿಲ್ಲೆಯಲ್ಲಿ ಶೇ.೭೬.೯೮ರಷ್ಟು ಮತದಾನ
ಚಿಕ್ಕಬಳ್ಳಾಪುರ.ಏ-೩೦- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ನಡೆದಿದ್ದು ಹೆಚ್ಚಿನ ಮತದಾನ ಶೇಕಡವಾರು ೭೬.೯೮. ರಷ್ಟು ಮತದಾನ ಆಗಿದೆ. ವಿಶೇಷವಾಗಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾರರು ತುಂಬಾ ಉತ್ಸಾಹ ದೊಂದಿಗೆ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿರುವುದು ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಶ ಇಟ್ಟಂತಾಗಿದೆ ಎಂದು ಮಾಜಿ ಸಚಿವ ಕೆ.ಪಿ. ಬಚ್ಚೇಗೌಡ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಚುನಾವಣಾ ಭ್ರಷ್ಟಾಚಾರ ನಡೆಸಿದ್ದರು ಸಹ ಮತದಾರರು ಆಸೆ ಆಮಿಷಗಳಿಗೆ ಒಳಗಾಗದೆ ನೈತಿಕತೆಯ ನಿಷ್ಠತೆಯಿಂದ ಮತದಾನ ಮಾಡಿರುವುದಕ್ಕೆ ಅವರನ್ನು ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಸಹ ತಿಳಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷಕ್ಕೆ ಭದ್ರಕೋಟೆ ಆಗಿದೆ ಅದೇ ರೀತಿ ಈ ಬಾರಿ ನಡೆದ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಗಳಿಸುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.