ಸರ್ಕಾರದ ನಿರ್ಧಾರಕ್ಕೆ ಎಐಡಿಎಸ್‍ಓ ಸ್ವಾಗತ
ಕಲಬುರಗಿ,ಏ.29-ಕೆಸಿಇಟಿ-ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ಕೈಬಿಟ್ಟು ಫಲಿತಾಂಶ ಪ್ರಕಟಿಸುವ ಸರ್ಕಾರದ ನಿರ್ಧಾರವನ್ನು ಎಐಡಿಎಸ್‍ಓ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಸ್ವಾಗತಿಸಿದ್ದಾರೆ.
ಕೆಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ಕೆ ಹೊರತಾದ ಪ್ರಶ್ನೆಗಳನ್ನು ನಗಣ್ಯ ಎಂದು ಪರಿಗಣಿಸಿ ಮೌಲ್ಯಮಾಪನ ಮಾಡಬೇಕೆಂಬುದು ರಾಜ್ಯದ ವಿದ್ಯಾರ್ಥಿಗಳ ಒತ್ತಾಸೆಯಾಗಿತ್ತು. ವಿದ್ಯಾರ್ಥಿಗಳ ಈ ಅಭಿಪ್ರಾಯವನ್ನು ಪರಿಗಣಿಸಿರುವ ರಾಜ್ಯ ಸರ್ಕಾರವು ಪಠ್ಯದಿಂದ ಹೊರತಾದ ಪ್ರಶ್ನೆಗಳನ್ನು ಕೈ ಬಿಟ್ಟು ಮೌಲ್ಯಮಾಪನ ನಡೆಸುವುದಾಗಿ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರವನ್ನು ಎಐಡಿಎಸ್‍ಓ ಕರ್ನಾಟಕ ರಾಜ್ಯ ಸಮಿತಿಯು ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳನ್ನು ತೀವ್ರ ಒತ್ತಡಕ್ಕೆ ದೂಡಿದ ಪ್ರಶ್ನೆ ಪತ್ರಿಕೆ ಅವಾಂತರಕ್ಕೆ ಕಾರಣರಾದವರನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕೆಂದು ಅವರು ಆಗ್ರಹಿಸಿದ್ದಾರೆ.