ಎತ್ತಿನ ಬಂಡಿಗಳ ಮುಖಾಂತರ ಮತದಾನ ಜಾಗೃತಿ ಜಾಥಾ
ಸೇಡಂ, ಎ, 29: ತಾಲೂಕ ಸ್ವೀಪ್ ಸಮಿತಿ ಹಾಗೂ ಆಡಕಿ ಗ್ರಾಮ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿಂದು ಗ್ರಾಮ ಮುಖ್ಯಬೀದಿಗಳಲ್ಲಿ ಎತ್ತಿನ ಬಂಡಿಗಳ ಮೂಲಕ ( ಮೇ 7 ರಂದು ಕಡ್ಡಾಯವಾಗಿ ಮತದಾನ ಮಾಡಲು) ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.ಈ ವೇಳೆಯಲ್ಲಿ ತಹಸೀಲ್ದಾರ್ ಶಿವಾನಂದ ಮೇತ್ರೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚನ್ನಪ್ಪ ರಾಯಣ್ಣನವರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಭಗವಂತರಾಯ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಶಿಕ್ಷಕರು, ಪಂಚಾಯತಿ ಸಂಜೀವಿನಿ ಸಿಬ್ಬಂದಿಗಳು, ಸಂಘದ ಮಹಿಳೆಯರು ಇದ್ದರು.