ಸ.ಪ್ರ.ದ.ಮಹಿಳಾ ಕಾಲೇಜು: ಎನ್‌ಎಸ್‌ಎಸ್ ಘಟಕದಿಂದ ವ್ಯಾಪಕ ಮತದಾನ ಜಾಗೃತಿ ಅಭಿಯಾನ
ರಾಯಚೂರು.ಏ.೨೯- ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಮೇ ರಂದು ಜರುಗಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡುವಂತೆ ಮತ್ತು ಆ ಮೂಲಕ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಯ ನಿರ್ಮಾಣಕ್ಕೆ ಪಾತ್ರವಹಿಸಬೇಕೆಂದು ಹೇಳಿದ ಎನ್‌ಎಸ್‌ಎಸ್ ಸ್ವಯಂ ಸೇವಕಿಯರು ಗರಿಷ್ಠ ಮತದಾನಕ್ಕಾಗಿ ಮನವಿ ಮಾಡಿದರು.
ಇಂದು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ರಾಜ್ಯಶಾಸ್ತ್ರ ವಿಭಾಗ ಜಂಟಿಯಾಗಿ ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿಯ ಸಹಯೋಗದಲ್ಲಿ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡ ಮತದಾರರ ಜಾಗೃತಿ ಅಭಿಯಾನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಂತೋಷಕುಮಾರ ರೇವೂರ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸುವ ಶಕ್ತಿ ಮತಕ್ಕೆ ಮಾತ್ರವಿದ್ದು ಪ್ರತಿಯೊಂದು ಮತಕ್ಕೂ ಗೆಲುವು ಮತ್ತು ಸೋಲನ್ನು ನಿರ್ಧರಿಸುವ ಶಕ್ತಿಯಿದೆ. ಹಾಗಾಗಿ ವಿದ್ಯಾರ್ಥಿನಿ ಸ್ವಯಂ ಸೇವಕರು ಮುಂದಿನ ಮೂರು ದಿನಗಳ ಕಾಲ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಬೇಕು. ಆಯಾ ಮೂಲಕ ಜಿಲ್ಲೆಯ ಮತದಾನದ ಪ್ರಮಾಣ ಹೆಚ್ಚಾಗುವಂತೆ ಶ್ರಮವಹಿಸಬೇಕು ಎಂದು ಹೇಳಿದರು.
ಕೇಂದ್ರ ಬಸ್ ನಿಲ್ದಾಣಾಧಿಕಾರಿ ಶ್ರೀ ಶೀಲಪ್ಪ ಮಾಡನಾಡಿ ವಿದ್ಯಾರ್ಥಿನಿಯರು ಮತದಾನ ಜಾಗೃತಿಗಾಗಿ ಬಿಡಿಸಿದ್ದ ರಂಗೋಲಿ ಸಾರ್ವಜನಿಕರಲ್ಲಿ ಮತದಾನ ಕುರಿತು ಅರಿವು ಮೂಡಿಸುವಲ್ಲಿ ಪರಿಣಾಮಕಾರಿಯಾಗಿ ಮೂಡಿಬಂದಿತ್ತು. ಈಗ ಮತದಾನದಿಂದ ಯಾರೂ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಪ್ರತಿಯೊಬ್ಬರಲ್ಲಿಯೂ ಮನವಿ ಮಾಡುತ್ತಿರುವ ವಿದ್ಯಾರ್ಥಿನಿ ಸ್ವಯಂ ಸೇವಕಿಯರ ಕಾರ್ಯವು ಅದ್ವಿತೀಯ ಮತ್ತು ಶ್ಲ್ಯಾಘನೀಯ ಎಂದು ಹೇಳಿದರು.
ಪ್ರಯಾಣಿಕರನ್ನು ಸಂಘಟಿಸಿ ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿನಿ ಸ್ವಯಂ ಸೇವಕಿಯರು ಕಾರ್ಯಕ್ರಮವನ್ನು ಸಂಘಟಿಸಿ ನಿರ್ವಹಿಸಿದರು.