ಇಂಡಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ, ಪರಿಶೀಲನೆ
ವಿಜಯಪುರ,ಸೆ.21: ಜಿಲ್ಲೆಯ ಇಂಡಿ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಭೇಟಿ ನೀಡಿ ತಾಲೂಕು ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.
ತಹಸೀಲ್ದಾರ ಕಚೇರಿಯ ಬಾಕಿ ಕಡತಗಳ ಪರಿಶೀಲನೆ, ಆಧಾರ ನೋಂದಣಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆ ಪ್ರಗತಿ ಮಾಹಿತಿ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇಂಡಿ ಮೆಗಾ ಮಾರುಕಟ್ಟೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ರಸ್ತೆ ಅಭಿವೃದ್ಧಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಪರಸಭೆಯ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಇತರರು ಉಪಸ್ಥಿತರಿದ್ದರು.