ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ: ಎ.ಆರ್.ಓ
ಅಫಜಲಪುರ: ಏ.28:2024ರ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಎಲ್ಲ ರೀತಿಯ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಜಾವೀದ್ ಕರಂಗಿ ತಿಳಿಸಿದರು.
ಮತದಾನ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಲು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಮಾಡುವುದು ತಮ್ಮ ಆದ್ಯ ಕರ್ತವ್ಯವಾಗಿದೆ. ಮತದಾನವು ನಮ್ಮ ದೇಶದ ಭವಿಷ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಪ್ರಮುಖ ನಾಗರಿಕ ಕರ್ತವ್ಯವಾಗಿದೆ. ಮತದಾನವು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಎಲ್ಲರಿಗೂ ಭಾಗವಹಿಸಲು ಸಮಾನ ಅವಕಾಶ ನೀಡುತ್ತದೆ. ಹೀಗಾಗಿ ಇಂತಹ ಸದಾವಕಾಶದಿಂದ ಯಾರೂ ವಂಚಿತರಾಗದೆ ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಗೆ ಅರ್ಹ ಮತದಾರರು ತಮ್ಮ ಮತಾಧಿಕಾರದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಎತ್ತಿ ಹಿಡಿಯಬೇಕು ಎಂದು ಕೋರಿದರು.
ಈ ವೇಳೆ ತಹಸೀಲ್ದಾರ ಸಂಜೀವಕುಮಾರ ದಾಸರ, ಗ್ರೇಡ್-2 ತಹಸೀಲ್ದಾರ ಶರಣಬಸಪ್ಪ ಹೊಸಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.