ಏಪ್ರಿಲ್ 29ರಂದು ಹನೂರು ವಿಧಾನಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಏ28- ಚಾಮರಾಜನಗರ ಮತದಾನ ಬಹಿμÁ್ಕರ ಮಾಡಿದ ಬಳಿಕ ಮತಗಟ್ಟೆಯನ್ನೇ ಧ್ಚಂಸಗೊಳಿಸಿದ್ದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಟ್ಟೆ ಸಂಖ್ಯೆ 146 ರಲ್ಲಿ ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೂ ಮರು ಮತದಾನ ಜರುಗಲಿದೆ.
ಶುಕ್ರವಾರ ಮತದಾನ ಬಹಿμÁ್ಕರದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ಗ್ರಾಮದ ಕೆಲವರು ಮತಗಟ್ಟೆಯನ್ನೇ ಧ್ವಂಸ ಮಾಡಿದ್ದ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಪೆÇಲೀಸರು ಬಂಧಿಸಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 221-ಹನೂರು ವಿಧಾನಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದ ಸರ್ಕಾರಿಕಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 146ರಲ್ಲಿ ಏಪ್ರಿಲ್ 29ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಸಲಾಗುತ್ತದೆ ಎಂದು ಚಾಮರಾಜನಗರ (ಪ.ಜಾ) ಲೋಕಸಭಾಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.