ಮಾಜಿ ಮೇಯರ್ ಕಾರಿನಲ್ಲಿ ರೂ.2 ಕೋಟಿ ಜಪ್ತಿ
ಕಲಬುರಗಿ:ಏ.27: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ ರೂ.2 ಕೋಟಿ ಹಣವನ್ನು ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ವಶಪಡಿಸಿಕೊಂಡಿದ್ದಾರೆ.
ಮಾಜಿ ಮೇಯರ್ ವೊಬ್ಬರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸುವ ಯತ್ನ ನಡೆಯುತ್ತಿತ್ತು ಎನ್ನಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಸಂಜೆ ವೇಳೆಗೆ ಈ ನಿಟ್ಟಿನಲ್ಲಿ ಖಚಿತ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.