ಕಲಬುರಗಿಯಲ್ಲಿ ಸೆ.29, 30 ರಂದು ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ
ವಿಜಯಪುರ,ಸೆ.21: ಕಲಬುರಗಿಯಲ್ಲಿ ಸೆ.29, 30 ರಂದು ಎರಡು ದಿನಗಳ ಕಾಲ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಮತ್ತು ಕರ್ನಾಟಕ ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಚಾಲಕ ಎನ್.ಎಲ್. ಭರತರಾಜ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನದಲ್ಲಿ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಮಹಾರಾಷ್ಟ್ರ, ತಮಿಳುನಾಡು, ಬಿಹಾರ ಹಾಗೂ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳ ಕಬ್ಬು ಬೆಳೆಗಾರರು ಮುಖಂಡರು ಪಾಲ್ಗೊಳ್ಳಲಿದ್ದು, ದೇಶದ ಕಬ್ಬು ಬೆಳೆಗಾರರ ಸ್ಥಿತಿಗತಿ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತಿದ್ದು, ಅಖಿಲ ಭಾರತ ಸಂಘದ ಅಧ್ಯಕ್ಷ ಡಿ. ರವೀಂದ್ರನ್, ಅಖಿಲ ಭಾರತ ಕಿಸಾನ್ ಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ವಿಜು ಕೃಷ್ಣನ್, ಅಖಿಲ ಭಾರತ ಕಬ್ಬು ಬೆಳೆಗಾರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಕೆ. ಶುಕ್ಲಾ ಇತರರು ಪಾಲ್ಗೊಳ್ಳಲಿದ್ದಾರೆ ಎಂದರು.
ಒಂದು ಟನ್ ಕಬ್ಬಿಗೆ 5 ಸಾವಿರ ರೂ.ಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಕುರಿತು ಸಮಾವೇಶÀದಲ್ಲಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು. ಸಮ್ಮೇಳನದಲ್ಲಿ 500 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖಂಡರಾದ ಅಣ್ಣಾರಾಯ ಈಳಗೇರ, ಭೀಮರಾಯ ಪೂಜಾರ, ಸುರೇಖಾ ರಜಪೂತ, ಗೋಪಾಲ ಶಿವಗದ್ದಿಗೆ, ಹನಮಂತ ಕುಂಬಾರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.