ನೀರಿಗಾಗಿ ಪರದಾಡುತ್ತಿರುವ ಹೂಡಾ ಕೆ ಗ್ರಾಮಸ್ಥರು
ಸೇಡಂ, ಎ, 26: ತಾಲೂಕಿನ ಮಳಖೇಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ (ರಾಜೀವ್ ನಗರ) ಹೂಡಾ ಕೆ ಗ್ರಾಮಕ್ಕೆ ಟ್ಯಾಂಕರ್ ನಿಂದ ನೀರು ಸರಬರಾಜು ಆಗುತ್ತಿದ್ದರು ಗ್ರಾಮದಲ್ಲಿ ನೀರಿನ ಸಮಸ್ಯೆ ದಿನನಿತ್ಯ ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಂಜೆವಾಣಿಗೆ ಗ್ರಾಮಸ್ಥರು ಮಾತನಾಡಿ ಅಳಲು ತೋಡಿಕೊಂಡಿದ್ದಾರೆ. ನೀರಿನ ಸಮಸ್ಯೆ ಬಗ್ಗೆ ಪಂಚಾಯಿತಯ ಅಧ್ಯಕ್ಷರಿಗೆ ಗ್ರಾಮೀಣ ಅಭಿವೃದ್ಧಿ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಇತ್ತ ಗಮನ ಹರಿಸುತ್ತಿಲ್ಲವೆಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ದಿನನಿತ್ಯ ಎರಡು ಮೂರು ನೀರಿನ ಟ್ಯಾಂಕರ್ ನೀರು ಸರಬರಾಜು ಮಾಡಬೇಕು ಒಂದು ವೇಳೆ ನೀರು ಸರಬರಾಜು ಆಗದೆ ಇದ್ದಲ್ಲಿ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದೆಂದು ತಿಳಿಸಿದ್ದಾರೆ.