ಏ.29 ರಂದು ಅಂಬೇಡ್ಕರ್ ಜಯಂತ್ಯುತ್ಸವ
ಕಲಬುರಗಿ,ಏ 26: ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ 133ನೇ ಜಯಂತ್ಯುತ್ಸವ ಹಾಗೂ ತ್ರಿಶಾ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ಉದ್ಘಾಟನಾ ಸಮಾರಂಭ ಇದೇ ಏ.29ರಂದು ಬೆಳಗ್ಗೆ 11ಕ್ಕೆ ನಗರದ ಕನ್ನಡ ಭವನದಲ್ಲಿ ನಡಯಲಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ ಚವ್ಹಾಣ ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಸಮಾರಂಭ ಉದ್ಘಾಟಿಸಲಿದ್ದಾರೆ ಎಂದರು.
ಜಿಪಂ. ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್, ಕಾಂಗ್ರೆಸ್ ಮುಖಂಡ ನೀಲಕಂಠರಾವ್ ಮುಲಗೆ, ರಾಜ್ಯ ಜೆಡಿಎಸ್ ಮುಖಂಡ ಕೃಷ್ಣಾರೆಡ್ಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ ಸಾಧಕರಿಗೆ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಸುರೇಶ್ ಎಲ್.ಶರ್ಮಾ ಅವರು ಸಾಧಕ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಅನುಷ್ಠಾನ ಸಮಿತಿ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ವಿಜಯಕುಮಾರ್ ಕಟ್ಟಿಮನಿ, ಮಹಾನಗರ ಪಾಲಿಕೆ ಸದಸ್ಯ ಸಚಿನ್ ಶಿರವಾಳ್, ಎಂ.ಎಸ್.ಐ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಸವರಾಜ ಕಾಗೆ, ಕಾಂಗ್ರೆಸ್ ಯುವ ಮುಖಂಡ ಸಂಜು ಕುಮಾರ್ ಸಂಗನ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಪತ್ರಕರ್ತ ಹಾಗೂ ಸಾಹಿತಿ ಸುರೇಶ ಬಡಿಗೇರ್ ಪ್ರಧಾನ ಭಾಷಣ ಮಾಡಲಿದ್ದು, ಟ್ರಸ್ಟ್ ಅಧ್ಯಕ್ಷೆ ಅಶ್ವಿನಿ ಚವ್ಹಾಣ ಹಾಗೂ ಉಪಾಧ್ಯಕ್ಷೆ ಸುನಂದಾ ಯುವರಾಜ ರಾಠೋಡ್ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.ಲಕ್ಷ್ಮಿ ಚವ್ಹಾಣ್, ಸುನಂದಾ ರಾಠೋಡ್, ಸಂತೋಷ್ ಬಿರಾದಾರ್ ಇದ್ದರು.