ಮೂರು ವರ್ಷಗಳಿಂದ ವಿಜಯನಗರ ಜಿಲ್ಲೆ@h18 = ಮಲೇರಿಯಾ ಮುಕ್ತ: ಡಾ.ಶಂಕರ ನಾಯ್ಕ
ಹೊಸಪೇಟೆ (ವಿಜಯನಗರ ಜಿಲ್ಲೆ) ಏಪ್ರೀಲ್ 25 (ಕ.ವಾ.): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮವು ಏಪ್ರೀಲ್ 25ರಂದು ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ  ಡಾ.ಶಂಕರ್ ನಾಯ್ಕ ಅವರು ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, 2025ರ ವೇಳೆಗೆ ಮಲೇರಿಯಾ ಮುಕ್ತ ಗುರಿ ಸಾಧಿಸೋಣ. ಈ ವಿಷಯದಲ್ಲಿ ಜನಜಾಗೃತಿ ಮೂಡಿಸುವುದರ ಜೊತೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯತತ್ಪರತೆ ಮುಖ್ಯವಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಆಸ್ಥೆವಹಿಸಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಮಾರ್ಗಸೂಚಿಯನುಸಾರ ಪ್ರತಿಯೊಂದು ಕಾರ್ಯಕ್ರಮಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸಲು ಶ್ರಮಿಸಿದಲ್ಲಿ 2025ರ ವೇಳೆಗೆ ಮಲೇರಿಯಾ ಮೂಲೋತ್ಪಾಟನೆ ಸಾಧ್ಯವಾಗಲಿದೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ವಿಜಯನಗರ ಜಿಲ್ಲೆಯು ಮಲೇರಿಯಾ ಮುಕ್ತವಾಗಿದೆ. ಇನ್ಮುಂದೆ ಸಹ ಶೂನ್ಯ ಮಲೇರಿಯಾ ಗುರಿ ತಲುಪಲು ಈಗಿರುವ ಸ್ಥಿತಿಯನ್ನೇ ಕಾಪಾಡಿಕೊಂಡು ಹೋಗಲು ಅನುಸರಿಸಬೇಕಾದ ಕ್ರಮಗಳು ಮತ್ತು ಕರ್ತವ್ಯಗಳ ಬಗ್ಗೆ ಎಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಮಲೇರಿಯಾ ಕುರಿತಾದ ಪೆÇೀಸ್ಟರ್‍ಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲೆಯ ವಿವಿಧ ಕಾರ್ಯಕ್ರಮ ಅನುμÁ್ಠನಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.