ದೇಶ ವಿಭಜನೆಗೆ ಅಂಬೇಡ್ಕರ್ ತೀವ್ರ ವಿರೋಧ-ಯತ್ನಳ
ಮಾನ್ವಿ.ಏ.೨೬- ಭಾರತ ದೇಶ ಧರ್ಮಧಾರಿತ ಹೆಸರಲ್ಲಿ ಮುಂದಿನ ದಿನಗಳಲ್ಲಿ ದೇಶ ವಿಭಜನೆ ಆಗುವ ಬಗ್ಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತೀವ್ರವಾಗಿ ವಿರೋಧಿಸಿ
ಕರಾಳ ದಿನವನ್ನು ಎದುರಿಸಬೇಕಾಗುತ್ತದೆ ಎಂದು ಭವಿಷ್ಯ ನುಡಿದಿದ್ದರು ಎಂದು ಮಾಜಿ ಕೇಂದ್ರ ಸಚಿವ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಅವರು ನಿನ್ನೆ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಪೂರ್ವ ಆಲೋಚನೆ ತೆಗೆದುಕೊಳ್ಳದೆ ಗಾಂಧಿಜಿಯವರು ನೆಹರು ಅವರನ್ನು ಪ್ರಧಾನಿ ಮಾಡುವ ಕನಸು ಕಂಡಿದ್ದರು. ಅಂಬೇಡ್ಕರ್ ಅವರ ವಿಚಾರದ ಧಾರೆಗಳು ಅರಿತುಕೊಳ್ಳದೆ ದೇಶ ವಿಭಜನೆ ದಾರಿ ಮಾಡಿದ್ದು, ಅದರ ಪರಿಣಾಮವನ್ನು ಎದುರಿಸಬೇಕಾದ ಪರಿಸ್ಥಿತಿ ಈಗ ನಿರ್ಮಾಣವಾಗಿದೆ.
ಪ್ರಜಾಪ್ರಭುತ್ವ ರಕ್ಷಣೆಗೆ ಮತ್ತು ದೇಶವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೆ ಅವಕಾಶ ಕೊಡಬೇಕೆಂದು ಅವರು ಹೇಳಿದರು. ಕಳೆದ ಹತ್ತು ವರ್ಷ ಅವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಸಮಗ್ರ ಅಭಿವೃದ್ಧಿ ಗುರಿ ಬಂದಿದೆ ಎಂದರು.
ರಾಷ್ಟ್ರದ ಸುಭದ್ರತೆ, ಐಕ್ಯತೆ, ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಸುಳ್ಳು ಗ್ಯಾರಂಟಿಗಳನ್ನು ನಂಬದೆ ಶಾಶ್ವತವಾದ ಮೋದಿ ಗ್ಯಾರಂಟಿಗಾಗಿ ಕ್ಷೇತ್ರದ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರನ್ನು ಗೆಲ್ಲಿಸುವ ಮೂಲಕ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಗಳನ್ನಾಗಿ ಮಾಡುವಂತೆ ಸಭೆಗೆ ಮನವಿ ಮಾಡಿದರು. ಕಳೆದ ೬೦ ವರ್ಷ
ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಹಗರಣಗಳ ಮೂಲಕ ಲಕ್ಷ, ಲಕ್ಷ ಕೋಟಿ ಹಣವನ್ನು ಲೂಟಿ ಹೊಡೆದಿದೆ. ಇಂದಿಗೂ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ,ಅವರ ಅಳಿಯ ವಾಧ್ರಾ ಬೇಲ್ ಮೇಲಿದ್ದಾರೆ. ಖಾವೂಂಗಾನ ಖಿಲಾವೂಂಗ ಸಿದ್ದಾಂತದ ಮೋದಿಯವರು ಮುಂಬರುವ ದಿನಗಳಲ್ಲಿ ಪಕ್ಷ ಭೇದವಿಲ್ಲದೇ ಭ್ರಷ್ಟಾಚಾರದಲ್ಲಿ ಗುರುತಿಸಿಕೊಂಡವರನ್ನು ಜೈಲಿಗೆ ಕಳುಹಿಸುವ ಸಂಶಯವಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ, ಮಾಜಿ ಸಂಸದ ಬಿ.ವಿ. ನಾಯಕ, ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಅನ್ವರಿ, ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ, ಗಂಗಾಧರನಾಯಕ ಮುಂತಾದವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಸಕ ಡಾ.ಶಿವರಾಜಪಾಟೀಲ, ಮಾನ್ವಿ ಮಂಡಲ ಅಧ್ಯಕ್ಷ ಜೆ.ಸುಧಾಕರ, ಶರಣಪ್ಪಗೌಡ ಜಾಡಲದಿನ್ನಿ, ಕೊಟೇಶಪ್ಪ ಕೋರಿ,ಕಡಗೋಲ ಆಂಜನೇಯ ಮುಂತಾದವರು ಇದ್ದರು.