ನಗರದಲ್ಲಿ ಬಿರುಸಿನ ಮತದಾನ
ಸಂಜೆವಾಣಿ ನ್ಯೂಸ್
ಮೈಸೂರು: ಏ.26:- ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಚುನಾವಣೆ ನಡೆಯುತ್ತಿದ್ದು, ಬೆಳಗ್ಗಿನಿಂದಲೇ ಸರತಿ ಸಾಲಿನಲ್ಲಿ ನಿಂತು ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ನಗರದಲ್ಲಿ ಬೆಳಗಿನ 11 ಗಂಟೆವರೆಗೆ ಶೇಕಡ 25.09 % ಪ್ರತಿಶತ ಮತದಾನ ದಾಖಲು. ಜನಪ್ರತಿನಿಧಿಗಳು, ಅಧಿಕಾರಿಗಳು, ಕಾವಿಧಾರಿಗಳಿಂದ ತಮ್ಮ ಹಕ್ಕು ಚಲಾಯಿದಿದ್ದರು.
ಬೆಳಗ್ಗಿನಿಂದಲೇ ಮತದಾನ ಆರಂಭವಾಗಿದ್ದು, ಜನರು ಬಿರುಸಿನಿಂದ ಮತದಾನ ಮಾಡಲು ಮತಗಟ್ಟೆ ಕೇಂದ್ರಗಳಿಗೆ ಬರುತ್ತಿದ್ದಾರೆ. ಕೆಲವೆಡೆ ವರ-ವಧು ಮತಗಟ್ಟೆಗಳಿಗೆ ಆಗಮಿಸಿ ಮತಚಲಾಯಿಸಿದ್ದು ಕಂಡು ಬಂದಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಲ್ಲ 2202 ಮತಗಟ್ಟೆಗಳಲ್ಲೂ ಈ ಬಾರಿ ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು ಇರಿಸಲಾಗಿದೆ. ಜತೆಗೆ 2202 ಮತಗಟ್ಟೆಗಳ ಪೈಕಿ 435 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, 41 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ.
ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಅಲ್ಲದೇ, ಮತಗಟ್ಟೆಗೆ ಬರುವ ಮತದಾರರಿಗೆ ಬಿಸಿಲಿನಿಂದ ಸಮಸ್ಯೆಯಾಗದಂತೆ ನೆರಳಿನ ವ್ಯವಸ್ಥೆ ಮಾಡಲಾಗಿದೆ.
ನಗರ ಸೇರಿದಂತೆ ಜಿಲ್ಲೆಯಲ್ಲಿ ಮತದಾನ ವೇಳೆ ಯಾವುದೇ ಅಕ್ರಮ, ಅಹಿತಕರ ಘಟನೆ ನಡೆಯದಂತೆ 5700 ಪೆÇಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲೆ ವ್ಯಾಪ್ತಿಯಲ್ಲಿ 3 ಸಾವಿರ ಪೆÇಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ.