ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ನೇಮಕ
ಸಂಜೆವಾಣಿ ವಾರ್ತೆ
ಚಾಮರಾಜನಗ, ಏ.26-ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಾಮಾಜಿಕ ಜಾಲತಾಣದ ವಿಭಾಗದ ಉಪಾದ್ಯಕ್ಷರಾಗಿ ಲಿಂಗನಪುರ ಗ್ರಾಮದ ಮಲ್ಲಿಕಾರ್ಜುನ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅರಕಲವಾಡಿ ಮಹೇಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರುಗಳ ಶಿಫಾರಿಸ್ಸಿನ ಮೇರೆಗೆ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಉಪಾಧ್ಯಕ್ಷರನ್ನಾಗಿ ಹಾಗೂ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದು, ಸಕ್ರಿಯವಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಜೊತೆಗೆ ಕೆಪಿಸಿಸಿ ಸಾಮಾಜಿಕ ಜಾಲತಾಣದ ಮೂಲಕ ಪಕ್ಷ ಹಾಗೂ ಸರ್ಕಾರ ಸಾಧನೆ ಮತ್ತು ಇತರೇ ವಿಚಾರಗಳನ್ನು ಮತದಾರರಿಗೆ ತಿಳಿಸುವ ಮೂಲಕ ಪಕ್ಷವನ್ನು ಬಲವರ್ಧನೆ ಮಾಡಬೇಕೆಂದು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.