ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ:ಏ.25: ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ “ಮತದಾನ ಜಾಗೃತಿ ಜಾಥಾ ಅಭಿಯಾನ” ಕ್ಕೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಸಂತೋಷ ಇನಾಮದಾರ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಂಕರ ರಾಠೋಡ ಅವರು ಬುಧವಾರ ಚಿಂಚೋಳಿಯಲ್ಲಿ ಚಾಲನೆ ನೀಡಿದರು.