ಪಂಚಾಯತ್ ರಾಜ್ ದಿವಸ್ ಆಚರಣೆ
ಕಲಬುರಗಿ,ಏ 25: ನಗರ ಹೊರವಲಯದ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಪ್ರಾದೇಶಿಕ ಕಚೇರಿಯಲ್ಲಿ ಪಂಚಾಯತ್ ರಾಜ್ ದಿವಸ್ ಆಚರಿಸಲಾಯಿತು. ಈ ಸಂದÀರ್ಭದಲ್ಲಿ ಪ್ರಾದೇಶಿಕ ಕಚೇರಿಯ ಉಪ ನಿರ್ದೇಶಕ ಧನರಾಜ್ ಬೋರಾಳೆ ಪ್ರಾದೇಶಿಕ ತರಬೇತಿ ಕೇಂದ್ರದ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಪ್ರಾದೇಶಿಕ ಕಚೇರಿಯ ಬೋಧಕರಾದ ಶಿವಪುತ್ರಪ್ಪ ಗೊಬ್ಬರು, ಡಾ.ರಾಜು ಕಂಬಳಿಮಠ, ಸಂತೋಷ ಎನ್. ಸಂಪನ್ಮೂಲ ವ್ಯಕ್ತಿ ಗೋವಿಂದರಾಜ್ ಹಾಗೂ ಸಿಬ್ಬಂಧಿಗಳಾದ ಅರ್ಚನ ಪಾಟೀಲ್, ಅಶ್ವಿನಿ ಪೂಜಾರಿ, ಹಾಗೂ ಬಿ.ಎಫ್.ಟಿ. ತರಬೇತಿಯ ಪ್ರಶಿಕ್ಷಣಾರ್ಥಿಗಳು, ಸಂಗಮೇಶ ಉಪಸ್ಥಿತರಿದ್ದರು.