ಮತದಾನಕ್ಕೆ ದೇಶ ಕಟ್ಟುವ ಶಕ್ತಿ ಇದೆ: ರಿಷಿ ಆನಂದ
ವಿಜಯಪುರ,ಏ.25 :ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ವಿಶೇಷಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ ಪ್ರಥಮ ಆದ್ಯತೆಯ ಮೇರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಇತ್ತೀಚೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶೇಷÀಚೇತನರ ಇಂಧನ ಚಾಲಿತ ತ್ರಿಚಕ್ರವಾಹನಗಳ ಬೈಕ್ ರ್ಯಾಲಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿ ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ಮತದಾನ ಪ್ರಮುಖವಾದದ್ದು, ಆದ್ದರಿಂದ ಪ್ರತಿಯೊಬ್ಬರು ನೈತಿಕವಾಗಿ ಹಾಗೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಾಗೃತಿ ಮೂಡಿಸಿದರು. ಜಿಲ್ಲೆಯಾದ್ಯಂತ ವಿವಿಧ ರೀತಿಯ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಿಮ್ಮ ನೆರೆ-ಹೊರೆಯವರಿಗೂ ಸಹ ಮತದಾನ ಮಾಡಲು ಪ್ರೇರೇಪಿಸಲು ತಿಳಿಸಿದರು.
ಜಿಲ್ಲಾಸ್ಪತ್ರೆಯಿಂದ ಸುಮಾರು 100 ಇಂಧನ ಚಾಲಿತ ತ್ರಿಚಕ್ರ ವಾಹನ, ಮತದಾನ ಜಾಗೃತಿಯ ಸ್ತಬ್ಧಚಿತ್ರ ವಾಹನದೊಂದಿಗೆ 200 ಕ್ಕಿಂತ ಹೆಚ್ಚು ವಿಶೇಷÀ ಚೇತನರು ಮತದಾನ ಜಾಗೃತಿಯ ಘೋಷÀಣೆಗಳನ್ನು ಕೂಗುತ್ತ ನಗರದ ಶ್ರೀ ಛತ್ರಪತಿ ಶಿವಾಜಿ ಮಹಾಜರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಭಕ್ತಿ ಭಂಡಾರಿ ಜಗಜ್ಯೋತಿ ಬಸವೇಶ್ವರ ವೃತ್ತ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳ ಮೂಲಕ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಬೈಕ್ ರ್ಯಾಲಿ ನಡೆಯಿತು.
ನಂತರ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ಸಾಕ್ಷಿ ಹಿರೇಮಠ ಅವರು ಮಹಾನಗರ ಪಾಲಿಕೆಯ ಉಪ ಆಯುಕ್ತÀ ಮಹಾವೀರ ಬೋರಣ್ಣವರ ಅವರು ರಚಿಸಿದ ಮತದಾರರ ಜಾಗೃತಿ ಕುರಿತು ರಚಿಸಿದ ಗೀತೆಯನ್ನು ಹಾಡಿದರು. ಜಿಲ್ಲಾ ಸ್ವೀಪ್ ಸಮಿತಿಯ ಇನ್ನೋರ್ವ ರಾಯಭಾರಿ ಸಹನಾ ಕುಡಿಗನೂರ ಅವರು ಮತದಾನ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತÀ ಅಶಾದ ಉರ್ ರೆಹಮಾನ್ ಶರೀಫ, ಜಿಲ್ಲಾ ಸ್ವೀಪ್ ಸಮಿತಿಯ ನೊಡೆಲ್ ಅಧಿಕಾರಿ ಸಿ.ಆರ್. ಮುಂಡರಗಿ, ಮಹಾನಗರ ಪಾಲಿಕೆಯ ಉಪ ಆಯುಕ್ತÀ ಮಹಾವೀರ ಬೋರಣ್ಣವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕÀ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಜಶೇಖರ ದೈವಾಡಿ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ. ಗುಂಡಬಾವಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಜೈಬುನ್ನಿಸಾ ಬೀಳಗಿ, ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸಹಾಯಕ ಆಡಳಿತ ಅಧಿಕಾರಿ ಹೇಮಂತ ಕುಲಕರ್ಣಿ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿ ರಾಜೇಶ ಪವಾರ, ಜಿಲ್ಲಾ ಪಂಚಾಯತಿ, ತಾಲೂಕ ಪಂಚಾಯತಿ, ಮಹಾನಗರ ಪಾಲಿಕೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿಯವರು ಹಾಗೂ ಇತರರು ಉಪಸ್ಥಿತರಿದ್ದರು.