ನೇಹಾ ಮತ್ತು ರಾಕೇಶ ಕೊಲೆ ಆರೋಪಿಗಳಿಗೇ ಗಲ್ಲು ಶಿಕ್ಷೆ ವಿಧಿಸಿ; ಪ್ರಶಾಂತಗೌಡ ಮಾಲಿಪಾಟೀಲ
ಕಲಬುರಗಿ:ಏ.25: ಹುಬ್ಬಳ್ಳಿಯ ಕು.ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುಂಚೆನೆ ಯಾದಗಿರಿ ಜಿಲ್ಲೆಯಲ್ಲಿ ದಲಿತ ಯುವಕ ರಾಕೇಶ್ ಹತ್ಯೆಯಾಗಿರುವುದು ಖಂಡಿನೀಯ, ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು, ಒಂದು ಸಮುದಾಯದ ಒಲೈಕೆಯಿಂದ ಕೋಟ್ಯಾಂತರ ಹಿಂದೂಗಳ ಭಾವನೆಗೆ ದಕ್ಕೆಯಾಗುತ್ತಿದ್ದು , ಇಂತಹ ಕೃತ್ಯಗಳನ್ನು ಮರುಕಳಿಸಿದಂತೆ ರಾಜ್ಯ ಸರ್ಕಾರ ಎಚ್ಚೆತುಕೊಳ್ಳಬೇಕು. ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿ ಅಧ್ಯಕ್ಷ ಪ್ರಶಾಂತಗೌಡ ಮಾಲಿಪಾಟೀಲ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಇರಿದು ಕೊಲೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ರಾಜ್ಯ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಕೊಲೆ ನಡೆದಿರುವುದು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸುವಂತಾಗಿದೆ ಎಂದು ತಿಳಿಸಿದರು.
ಹುಬ್ಬಳ್ಳಿ ಪ್ರಕರಣದ ಆರೋಪಿ ಫಯಾಜ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜೊತೆಗೆ ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು. ಇದೊಂದು ಪ್ರೇಮ ಪ್ರಕರಣ ಎಂದು ಗೃಹಸಚಿವರು ಹೇಳಿರುವುದು ಸರಿಯಲ್ಲ. ಓಟ್ ಬ್ಯಾಂಕ್ ರಾಜಕಾರಣ ಮಾಡಬಾರದು. ಇಡೀ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು. ಕೊಲೆಗಾರರನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಮಾಲಿಪಾಟೀಲ ಅವರು ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.