ಜಿಲ್ಲಾ ಪಂಚಾಯಿತಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ
ಕಲಬುರಗಿ :ಏ.25:ಜಿಲ್ಲಾ ಪಂಚಾಯಿತಿಯಲ್ಲಿ “ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ” ಆಚರಿಸಲಾಯಿತು.
ಜಿಲ್ಲಾ ಪಂಚಾಯತ್ ಕಲಬುರಗಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವರ್ ಸಿಂಗ್ ಮೀನಾ ರವರು ಕೇಕ್ ಕಟ್ ಮಾಡುವ ಮೂಲಕ “ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ’ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡುತ್ತ ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್ ಹಾಗು ಗ್ರಾಮ ಪಂಚಾಯಿತಿಗಳು ಸ್ಥಾಪನೆ ಮಾಡಿರುವುದರಿಂದ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಯಾಗುತ್ತಿದೆ ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಅಬ್ದುಲ್ ಅಜಿಮ್ ಉಪ ಕಾರ್ಯದರ್ಶಿಗಳು, ಶ್ರೀ ಮಲ್ಲಿಕಾರ್ಜುನ ಚಲಕೇರಿ ಯೋಜನಾ ನಿರ್ದೇಶಕರು, ಶ್ರೀ ಸಂತೋಷ ಮುಖ್ಯ ಲೆಕ್ಕಾಧಿಕಾರಿಗಳು, ಶ್ರೀಮತಿ ಮಧುಮತಿ Pಂ &ಇಔ, ಶ್ರೀ ವಿಜಯಲಕ್ಷ್ಮಿ ಂPಔ, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.