ಸ್ವಚ್ಛತೆಯೆಡೆಗೆ ಒಂದು ಹೆಜ್ಜೆ
ಹುಬ್ಬಳ್ಳಿ,ಸೆ.21:ಸ್ವಚ್ಛ ಸುಂದರ ರಾಷ್ಟ್ರ ನಿರ್ಮಾಣದ ಪರಿಕಲ್ಪನೆಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅವರು ಕರೆ ಕೊಟ್ಟಿರುವ “ಸ್ವಚ್ಛತಾ ಹೀ ಸೇವಾ” ಅಭಿಯಾನದ ಭಾಗವಾಗಿ ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ನಡೆದ “ಸ್ವಚ್ಛತೆಯೇ ಸೇವೆ -2024” ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಸಸಿ ನೆಟ್ಟು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.
ನಮ್ಮ ನಗರದ ಸ್ವಚ್ಛತೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ರಧಾನಮಂತ್ರಿಗಳ ಈ ಕರೆಗೆ ದೇಶಾದ್ಯಂತ ಉತ್ತಮ ಸ್ಪಂದನೆ ಕೂಡ ದೊರಕಿದೆ. ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡು ಈ ಅಭಿಯಾನದಲ್ಲಿ ಭಾಗವಹಿಸಿ ಮತ್ತು ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಕರೆಯಂತೆ “ಏಕ್ ಪೇಡ್ ಮಾ ನಾಮ್ – ಅಮ್ಮನ ಹೆಸರಿನಲ್ಲಿ ಒಂದು ಗಿಡ” ಅಭಿಯಾನದ ಭಾಗವಾಗಿ ಗಿಡ ನೆಟ್ಟು ಎಲ್ಲರೂ ಈ ಅಭಿಯಾನದಲ್ಲಿ ಭಾಗಿಯಾಗುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ, , ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ರಾಮಣ್ಣ ಬಡಿಗೇರ, ಬಿಜೆಪಿ ಜಿಲ್ಲಾಧ್ಯಕ್ಷರಾದ ತಿಪ್ಪಣ್ಣ ಮಜ್ಜಗಿ ಹಾಗೂ ಪಾಲಿಕೆಯ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.