ಹಬೋಹಳ್ಳಿ :ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕರು  ಚಾಲನೆ
ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ. ಸೆ.21 ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾ ಮಂದಿರ ಆವರಣದಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಶಾಸಕ ಕೆ. ನೇಮಿರಾಜ್ ನಾಯ್ಕ ಚಾಲನೆ ನೀಡಿದರು.
ನಂತರ ಶಾಸಕರು ಮಾತನಾಡಿ ಪಠ್ಯದ ಜೊತೆಗೆ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ದೈಹಿಕವಾಗಿ ಸದೃಢರಾಗಬೇಕು. ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಈ ಕ್ರೀಡಾಪಟುಗಳು ಭಾಗವಹಿಸಿ ಹೆಸರು ತರುವಂತ ಕೆಲಸ ಮಾಡಬೇಕು. ತಂದೆ ತಾಯಿಗಳ ಕ್ರೀಡೆಗೆ ಆದ್ಯತೆ ನೀಡಬೇಕು. ಜೊತೆಗೆ ಪ್ರೋತ್ಸಾಹ ನೀಡುವ ಮೂಲಕ ಒಳ್ಳೆಯ ಪ್ರತಿಭೆಗಳನ್ನು ನನ್ನ ಬೆಂಬಲಿಸಬೇಕು ಎಂದರು.
ಕಾರ್ಯಕ್ರಮದ ಸಾನಿಧ್ಯ ವನ್ನು  ನಂದೀಪುರ ಮಹೇಶ್ವರ ಸ್ವಾಮೀಜಿ, ಹಾಲಸಿದ್ದೇಶ್ವರ  ಸ್ವಾಮೀಜಿ, ವಹಿದ್ದರು
ಈ ಸಂದರ್ಭದಲ್ಲಿ  ಇಒ ಡಾ. ಪರಮೇಶ್ವರಪ್ಪ,ಬಿ ಇ ಒ ಮೈಲೇಶ್ ಬೇವೂರ್, ದೈಹಿಕ ಶಿಕ್ಷಣಾಧಿಕಾರಿ ಸೋಮಪ್ಪ,ಕ್ಷೇತ್ರ ಸಮನ್ವಯ ಅಧಿಕಾರಿ ಪ್ರಭಾಕರ,  ಇತರರಿದ್ದರು.