ಏ.29 ಹೊಸಪೇಟೆಗೆ  ಮೋದಿ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರು ಏ.29 ಸೋಮವಾರದಂದು ಲೋಕಸಭಾ ಚುನಾವಣೆಯ ಪ್ರಚಾರಕ್ಕೆಂದು  ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಕ್ಕೆ ಆಗಮಿಸುತ್ತಿದ್ದಾರೆ.
ಅವರು ಅಂದು ಬೆಳಿಗ್ಗೆ ಹೊಸಪೇಟೆಯ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿರುವ ಬಿಜೆಪಿಯ  ಬೃಹತ್ ಬಹಿಂರಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ವೇಳೆ ಪಕ್ಷದ ಮುಖಂಡ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಅಭ್ಯರ್ಥಿ ಬಿ.ಶ್ರೀರಾಮುಲು, ಹಗರಿಬೊಮ್ಮನಹಳ್ಳಿಯ ಜೆಡಿಎಸ್ ಶಾಸಕ ನೇಮರಾಜನಾಯ್ಕ, ಹಡಗಲಿಯ ಶಾಸಕ  ಕೃಷ್ಣನಾಯ್ಕ,  ಮಾಜಿ ಸಚಿವ ಆನಂದ್ ಸಿಂಗ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ವಿಜಯನಗರ ಜಿಲ್ಲಾ ಅಧ್ಯಕ್ಷ ಚೆನ್ನಬಸನಗೌಡ ಪಾಟೀಲ್ ತಿಳಿಸಿದ್ದಾರೆ.
ಮೋದಿ ಅವರ ಆಗಮನದ ಹಿನ್ನಲೆಯಲ್ಲಿ ಎಸ್ ಪಿ ಜಿ ತಂಡ ನಿನ್ನೆ  ಮೈದಾನದ ಪರಿಶೀಲನೆ ನಡೆಸಿದೆ.