ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ
ಲಕ್ಷ್ಮೇಶ್ವರ,ಏ25: ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಜಿಲ್ಲಾ ಸ್ವೀಪ್ ಕಮಿಟಿ ಮತ್ತು ಗ್ರಾಮ ಪಂಚಾಯಿತಿ ಇವುಗಳ ಸಹಯೋಗದಲ್ಲಿ ಮತದಾರ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ಆರಂಭವಾದ ಮೆರವಣಿಗೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸಿಬ್ಬಂದಿ ಮತ್ತು ಸಾರ್ವಜನಿಕರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಬಸವರಾಜ ಅರ್ಕಸಾಲಿ ಅವರು ಪ್ರತಿಜ್ಞಾವಿಧಿ ಭೋದಿಸಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಕಡ್ಡಾಯವಾದ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಚುನಾವಣಾ ಹಬ್ಬದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವವನ್ನು ಬಲಪಡಿಸಲು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.