ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ
ಧಾರವಾಡ,ಏ25: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಧಾರವಾಡ ಲೋಕಸಭೆ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಿದ್ದಾರೆ.
ಮಾನ್ಯತೆ ಪಡೆದ ರಾಷ್ಟ್ರೀಯ ರಾಜಕೀಯ ಪಕ್ಷಗಳಾದ ಭಾರತಿಯ ಜನತಾ ಪಾರ್ಟಿಯ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರಿಗೆ ಕಮಲ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನೋದ ಅಸೂಟಿ ಅವರಿಗೆ ಕೈ ಚಿಹ್ನೆ ನೀಡಲಾಗಿದೆ.
ಪಕ್ಷೇತರ ಅಭ್ಯರ್ಥಿಗಳಾದ ಡಾ.ಗುರಪ್ಪ ಹೆಚ್ ಇಮ್ರಾಪೂರ ಅವರಿಗೆ ಹಲಸಿನ ಹಣ್ಣು, ಪ್ರವೀಣ್. ಹ. ಹತ್ತೆನವರ ಅವರಿಗೆ ಸಿತಾರ್, ಬಾಳನಗೌಡ್ರ ಮಲ್ಲಿಕಾರ್ಜುನಗೌಡ ಅವರಿಗೆ ಟಿಲ್ಲರ್, ರಾಜು ಅನಂತಸಾ ನಾಯಕವಾಡಿ ಅವರಿಗೆ ಕೈಗಾಡಿ, ಶಕೀಲ ಅಹ್ಮದ ಡಿ ಮುಲ್ಲಾ ಅವರಿಗೆ ಹಣ್ಣುಗಳು ಇರುವ ಬ್ಯಾಸ್ಕೆಟ್, ಎಸ್.ಎಸ್. ಪಾಟಿಲ್ ಅವರಿಗೆ ಏಳು ಕಿರಣಗಳು ಇರುವ ಪೆನ್ನಿನ ನಿಬ್ ಚಿಹ್ನೆಗಳನ್ನು ಹಂಚಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದರು.