ಅಕ್ರಮ ಮದ್ಯ ಜಪ್ತಿ
ಯಾದಗಿರಿ,ಏ 24: ಶಹಾಪೂರ ಪಟ್ಟಣದ ಅಗ್ನಿಶಾಮಕ ದಳದ ಕಚೇರಿಯ ಮುಂಭಾಗದ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4.320 ಲೀ ಮದ್ಯ ಮತ್ತು 7.800 ಲೀ ಬಿಯರ್ ಅನ್ನು ಅಬಕಾರಿ ತಂಡದವರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಧರ್ಮಣ್ಣ ಕರೆಪ್ಪ ನರಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಅಬಕಾರಿ ನಿರೀಕ್ಷಕ ವಿಜಯಕುಮಾರ ಹಿರೇಮಠ ಮತ್ತು ಸಿಬ್ಬಂದಿ ಈ ಸಂದರ್ಭದಲ್ಲಿದ್ದರು.