ಜಾಗತಿಕ ಪಾರಂಪರಿಕ ಸ್ಥಳವಾಗಿಸಲು ಶ್ರಮಿಸೋಣ
ಗದಗ,ಸೆ.21: ಲಕ್ಕುಂಡಿ ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಜಾಗತಿಕ ಪಾರಂಪರಿಕ ಸ್ಥಳ ಎಂದು ಗುರುತಿಸುವಂತೆ ಮಾಡಲು ನಾವೆಲ್ಲ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು. ಲಕ್ಕುಂಡಿ ಪ್ರದೇಶದಲ್ಲಿ ಈಗಾಗಲೇ ಪ್ರವಾಸೊದ್ಯಮ ಇಲಾಖೆಯಿಂದ 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಭೂಮಿ ಪೂಜೆಯನ್ನು ಇತ್ತೀಚೆಗೆ ನೆರವೇರಿಸಲಾಗಿದೆ. ಸರ್ಕಾರ ಲಕ್ಕುಂಡಿ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಿದೆ. ಸಾರ್ವಜನಿಕರ ಸಹಕಾರವೂ ಸಹ ಅಗತ್ಯವಾಗಿದೆ ಎಂದರು.
ಶಾಸಕ ಸಿ.ಸಿ.ಪಾಟೀಲ ಮಾತನಾಡಿ ಲೊಕೋಪಯೋಗಿ ಇಲಾಖೆಯಲ್ಲಿ ಉತ್ತಮ ಆರ್ಕೆಟಿಕ್ ವಿಭಾಗ ಕಾರ್ಯನಿರ್ವಹಿಸುತ್ತಿದ್ದು ಅವರ ಸಹಕಾರದೊಂದಿಗೆ ಉತ್ತಮ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಬಹುದಾಗಿದೆ. ಲಕ್ಕುಂಡಿ ಇತಿಹಾಸ ಪರಂಪರೆ ನಾಡಿನುದ್ದಕ್ಕೂ ಪಸರಿಸಲು ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು.
ಸಭೆಯಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಮಟ್ಟದ ಸಲಹಾ ಸಮಿತಿ ಸದಸ್ಯರಾದ ಸಿದ್ದು ಪಾಟೀಲ,ಅ.ದ. ಕಟ್ಟಿಮನಿ ಸೇರಿದಂತೆ ಲಕ್ಕುಂಡಿ ಗ್ರಾ.ಪಂ. ಸದಸ್ಯರು, ಸಾಹಿತಿ ಪುಂಡಲೀಕ ಕಲ್ಲಿಗನೂರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ. ಸಿಇಓ ಭರತ್ ಎಸ್, ಪುರಾತತ್ವ ಇಲಾಖೆಯ ಆಯುಕ್ತ ದೇವರಾಜ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ ಮೀನಾ, ಹೆಚ್ಚುವರಿ ಪೆÇಲೀಸ ವರಿಷ್ಟಾಧಿಕಾರಿ ಎಂ.ಬಿ. ಸಂಕದ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ, ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಹಾಜರಿದ್ದರು.