ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ತಯಾರಿ
ಬೆಂಗಳೂರು, ಏ.೨೪- ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ತಯಾರಿ ನಡೆಯಿತು.
ನಗರದಲ್ಲಿಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ತಯಾರಿಯನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಜರುಗಿತು.
ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ೨೪ ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ೧ ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ೩ ಲೋಕಸಭಾ ಕ್ಷೇತ್ರಗಳು ಬರಲಿವೆ.
ಅದರಂತೆ, ೨೮ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ ೪೩೧೨೩ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಜೊತೆಗೆ ೩೦೫ ವಲ್ನರಬಲ್ ಹಾಗೂ ಕ್ರಿಟಿಕಲ್ ಮತಗಟ್ಟೆಗಳಿಗಾಗಿ ೩೮೫ ಮೈಕ್ರೋ ಅಬ್ಸರ್ವರ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ. ಮಾಡಲಾಯಿತು.
ಇನ್ನೂ, ಲೋಕಸಭಾ ಚುನಾವಣೆಗೆ ನಿಯೋಜಿಸಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಕುರಿತು ಎರಡು ಬಾರಿ ತರಬೇತಿಯನ್ನು ನೀಡಲಾಗಿದೆ.
ನಗರದಲ್ಲಿರುವ ಎಲ್ಲಾ ೮೯೮೪ ಮತಗಟ್ಟೆಗಳಲ್ಲಿ ಏಪ್ರಿಲ್ ೨೬ ರಂದು ಮತದಾನ ನಡೆಯಲಿದ್ದು, ಈ ಸಂಬಂಧ ನಾಳೆ ಎಲ್ಲಾ ಸಿಬ್ಬಂದಿಗಳು ಬೆಳಗ್ಗೆ ೯.೩೦ಕ್ಕೆ ಮಸ್ಟರಿಂಗ್ ಕೇಂದ್ರಗಳಿಗೆ ತೆರಳಿ ಮತಗಟ್ಟೆಗಳ ಸಾಮಗ್ರಿಗಳನ್ನು ಸಂಗ್ರಹಿಸಿಕೊಂಡು ಆಯಾ ಚುನಾವಣಾಧಿಕಾರಿಗಳು ವ್ಯವಸ್ಥೆ ಮಾಡಿರುವ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ.
ಈ ವೇಳೆ ಸಾಮಾನ್ಯ ವೀಕ್ಷಕರಾದ ಗಾಯತ್ರಿ ರಾಥೋರ್, ವಾಣಿ ಮೋಹನ್, ಮಕರಂದ್ ಪಾಂಡುರಂಗ, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ. ಹರೀಶ್ ಕುಮಾರ್, ಕೆ.ಎ ದಯಾನಂದ್, ವಿನೋತ್ ಪ್ರಿಯಾ, ಸ್ನೆಹಲ್, ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್ ಉಪಸ್ಥಿತರಿದ್ದರು.