ರಾಹುಲ್ ಗಾಂಧಿ ಕಾರ್ಯಕ್ರಮ: ಸ್ಥಳ ಸಿದ್ದತೆ ವೀಕ್ಷಿಸಿದ ಸಚಿವ ಎಂ.ಬಿ. ಪಾಟೀಲ
ಸಂಜೆವಾಣಿ ವಾರ್ತೆ,
ವಿಜಯಪುರ,ಏ.24: ಸಂಸದ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಏ. 26 ರಂದು ವಿಜಯಪುರ ನಗರಕ್ಕೆ ಆಗಮಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಪರ ಪ್ರಚಾರ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ಕಾರ್ಯಕ್ರಮ ನಡೆಯಲಿರುವ ಬಿ.ಎಲ್.ಡಿ.ಇ. ಹೊಸ ಕ್ಯಾಂಪಸ್‍ಗೆ ತೆರಳಿ ಮಂಗಳವಾರ ಸಂಜೆ ಸಿದ್ದತೆ ಪರಿಶೀಲನೆ ನಡೆಸಿದರು.
ಏ. 26 ರಂದು ಬೆಳಿಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಅವರೊಂದಿಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿರಲಿದ್ದಾರೆ.
ತಯಾರಿ ವೀಕ್ಷಣೆ ಸಂದರ್ಭ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ, ನಾಗಠಾಣ ಶಾಸಕ ವಿಠಲ ಕಟಕದೊಂಡ, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಎಸ್ಪಿ ರಿಷಿಕೇಷ ಸೋನಾವಣೆ, ನಗರ ಡಿವೈಎಸ್ಪಿ ಬಸವರಾಜ ಯಲಿಗಾರ, ಗೋಳಗುಮ್ಮಟ ಸಿಪಿಐ ಮಲ್ಲಯ್ಯ ಮಠಪತಿ, ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರ್ ರಾಜು ಮುಜುಮದಾರ ಮುಂತಾದವರು ಉಪಸ್ಥಿತರಿದ್ದರು.