ನಾಳೆ ಮಲ್ಲಿಕಾರ್ಜುನ ಖರ್ಗೆ,ಸಿಎಂ ಪ್ರಚಾರಸಭೆ
ಕಲಬುರಗಿ,ಏ.23: ಲೋಕಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಮುಖ್ಯಮಂತ್ರಿ ಸಿದ್ಧರಾಮಯ್ಯ,ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಾಳೆ (ಏ.24) ಕಲಬುರಗಿ ನಗರಕ್ಕೆ ಆಗಮಿಸಿ ಅಫಜಲಪುರ ಹಾಗೂ ಅಳಂದ ಪಟ್ಟಣಗಳಲ್ಲಿ ಬಹಿರಂಗ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಫಜಲಪುರ ಪಟ್ಟಣದಲ್ಲಿ ಮಧ್ಯಾಹ್ನ 12 ಕ್ಕೆ ಮತ್ತು ಮಧ್ಯಾಹ್ನ 2.30 ಕ್ಕೆ ಅಳಂದ ಪಟ್ಟಣದಲ್ಲಿ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡುವರು.ನಂತರ ಹೆಲಿಕ್ಯಾಫ್ಟರ್ ಮೂಲಕ ಬೀದರಗೆ ಪ್ರಯಾಣ ಬೆಳೆಸುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ತಿಳಿಸಿದ್ದಾರೆ.