ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ; ಕಠಿಣ ಶಿಕ್ಷೆ ವಿಧಿಸಲು ರವಿ ಸಿಂಗೆ ಆಗ್ರಹ
ಕಲಬುರಗಿ: ಏ.23:ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾ ಹಿರೇಮಠ ರವರ ಭೀಕರ ಕೊಲೆ, ಹತ್ಯೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಮುಖಂಡ ರವಿ ಸಿಂಗೆ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ, ಕೊಲೆಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ,ರಕ್ಷಣೆ ಇಲ್ಲದೆ ಇರುವುದು ಈ ಘಟನೆಗಳಿಗೆ ಕಾರಣವಾಗಿವೆ. ಹುಬ್ಬಳ್ಳಿ ವಿದ್ಯಾನಗರದ ಕೆಎಲ್‍ಇಯ ಅಡ್ಡಿಯಲ್ಲಿ ಬರುವ ಕರ್ನಾಟಕ ಲಿಂಗಾಯತ ಶಿಕ್ಷಣ ತಾಂತ್ರಿಕ ವಿಶ್ವವಿದ್ಯಾನಿಲಯ (ಬಿವಿಬಿ) ಆವರಣದಲ್ಲಿ ಗುರುವಾರ ರಂದು ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೆ ತನ್ನ ಹಳೆಯ ಸಹಪಾಠಿ ಚಾಕುವಿನಿಂದ ಕೊಲೆಮಾಡಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ ಎಂದರು. ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದರು.