ಜಿ ಎಂ ಎಸ್ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಸಂಜೆವಾಣಿ ವಾರ್ತೆ
ದಾವಣಗೆರೆ. ಏ.೨೩;   ನಗರದ  ಜಿ ಎಂ ಎಸ್ ಕಾಲೇಜು ವತಿಯಿಂದ ಪ್ರಸ್ತುತ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಪದವಿ ಪಡೆದ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ವೃತ್ತಿ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಾಳೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿ ಎಂ ಎಸ್ ಕಾಲೇಜಿನ ಪ್ರಾಂಶುಪಾಲರಾದ  ಡಾ  ಶ್ವೇತಾಮರಿಗೌಡರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜಿ ಎಂ ಎಸ್  ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಏಪ್ರಿಲ್ 24 ರಂದು ಆಯೋಜಿಸಿದ್ದು, ಪ್ರಸ್ತುತ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಪದವಿ ಪಡೆದ ವಿದ್ಯಾರ್ಥಿಗಳು ಈ  ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.ದಾವಣಗೆರೆ ನಗರದ  ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಾಯದಿಂದ ನಡೆಯುವ ಈ ಉದ್ಯೋಗ ಮೇಳದಲ್ಲಿ 12  ಕಂಪನಿಗಳು  ಭಾಗವಹಿಸಲಿದ್ದು, 1 ಸಾವಿರಕ್ಕೂ ಅಧಿಕ ಉದ್ಯೋಗವಕಾಶಗಳು ಲಭ್ಯವಿದೆ ಎಂದು ಉದ್ಯೋಗಾಧಿಕಾರಿ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಸಕ್ತಿಯುಳ್ಳ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು ಮತ್ತು ಸ್ವ ವಿವರದೊಂದಿಗೆ ಕನಿಷ್ಠ ಐದು ಸೆಟ್ ಜೆರಾಕ್ಸ್ಪ್ರತಿಗಳೊಂದಿಗೆ ಕಡ್ಡಾಯವಾಗಿ ತರತಕ್ಕದ್ದು, ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. 24 ನೇ ಬುಧವಾರದಂದುಬೆಳಗ್ಗೆ 9ಕ್ಕೆ ಆವರಣದಲ್ಲಿ ಹಾಜರಿರಬೇಕಾಗಿ ವಿನಂತಿಸಲಾಗಿದೆ.ಮೇಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಈ ಕೆಳಗೆ ಕೊಟ್ಟಿರುವ ಲಿಂಕ್ ಮೂಲಕ ತಮ್ಮ ಸ್ವ ವಿವರವನ್ನು ನೋಂದಾಯಿಸತಕ್ಕದ್ದು. https://forms.gle/iENw3UquSeMYWW9x6 ಹಾಗೂ ಹೆಚ್ಚಿನ ಮಾಹಿತಿಗೆ ಕೆಳಗೆ ಕೊಟ್ಟಿರುವ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.8892721679/9482876203