ಏ.26  ನಗರದಕ್ಕೆ ರಾಹುಲ್ ಗಾಂಧಿ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಏ.23: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಏ.26 ರಂದು ಸಂಜೆ ನಗರದ ಮುನಿಷಿಪಲ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿರಯವ ಚುನಾವಣಾ ಪ್ರಚಾರದ ಬಹುರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ನಗರ ಜಿಲ್ಲಾ ಅಧ್ಯಕ್ಷ ಅಲ್ಲಂ ಪ್ರಶಾಂತ್ ತಿಳಿಸಿದ್ದಾರೆ.
ಸಂಜೆವಾಣಿ ಜೊತೆ ಮಾತನಾಡಿದ ಅವರು. ಅಂದು ಸಂಜೆ 4.30 ಕ್ಕೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಕ್ಷದ ಅಭ್ಯರ್ಥಿ ಈ.ತುಕರಾಂ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಈ ಸಮಾವೇಶದಲ್ಲಿ ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ , ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್, ಸ್ಥಳೀಯ ಶಾಸಕ ಭರತ್ ರೆಡ್ಡಿ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಈ ಹಿನ್ನಲೆಯಲ್ಲಿ ಸಮಾವೇಶಕ್ಕೆ ಬರುವಂತೆ ಮತ್ತು ಅಭ್ಯರ್ಥಿಗೆ ಮತ ನೀಡುವಂತೆ ನಗರ ಶಾಸಕರು ಮತ್ತು ಸಚಿವರು ವಾರ್ಡ್ ಗಳಲ್ಲಿ, ಗ್ರಾಮಗಳಲ್ಲಿ ಪ್ರಚಾರ ಕಾರ್ಯ ನಡೆಸಿದ್ದಾರೆ.