ಮಳಖೇಡನಲ್ಲಿ ಮತದಾನ ಜಾಗೃತಿ ಜಾಥಾ
ಸೇಡಂ,ಎ, 23: ತಾಲೂಕಿನ ಮಳಖೇಡ ಗ್ರಾಮದಲ್ಲಿಂದು ತಾಲೂಕ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಗ್ರಾಮದ ಕೃಷಿ ಉತ್ಪನ್ನ ಮಾರುಕಟ್ಟೆ, ಬಸ್ಟ್ಯಾಂಡ್, ಪಂಚಾಯತ್
ಸೇರಿದಂತೆ ಹಲವು ಸ್ಥಳಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಜರಗಿತು. ಈ ವೇಳೆಯಲ್ಲಿ ತಹಸಿಲ್ದಾರ್ ಶಿವಾನಂದ ಮೇತ್ರೆ, ತಾಪಂ ಇಓ ಚನ್ನಪ್ಪ ರಾಯಣ್ಣನವರ, ಗ್ರೇಡ್ ಟು ತಹಸಿಲ್ದಾರ್ ಸಿದ್ದರಾಮ ನಾಚವರ, ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಉಮಾಪತಿ ರಾಜು, ಪುರಸಭೆ ಮುಖ್ಯಾಧಿಕಾರಿ ಶರಣಯ್ಯ ಸ್ವಾಮಿ, ಸರ್ಕಾರಿ ನೌಕರರ ಅಧ್ಯಕ್ಷ ಶಿವಶಂಕರಯ್ಯ ಸ್ವಾಮಿ, ಶರಣಗೌಡ ಪಾಟೀಲ್, ರವಿಕುಮಾರ್ ಸೇರಿದಂತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಇದ್ದರು.