ಕಾಮಗಾರಿಗೆ ಗುದ್ದಲಿ ಪೂಜೆ
ನವಲಗುಂದ,ಏ23 : ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದುಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ನವಲಗುಂದ ಮತ್ತು ಅಣ್ಣಿಗೇರಿ ತಾಲೂಕು ವತಿಯಿಂದ ಹಾಗೂ ಶಿಶುವಿನಹಳ್ಳಿ ಗ್ರಾಮ ಪಂಚಾಯತಿ ಮತ್ತು ಕೆರೆ ಅಭಿವೃದ್ಧಿ ಸಮಿತಿ ಇವರ ಸಹಯೋಗದಿಂದ ” ನಮ್ಮೂರು ನಮ್ಮ ಕೆರೆ ” ಕಾರ್ಯಕ್ರಮ ದಡಿಯಲ್ಲಿ ದುಂದೂರು ಗ್ರಾಮದ ಕುಡಿಯುವ ನೀರಿನ ಕೆರೆ ಕಾಮಗಾರಿಗೆ ಸಂಸ್ಥೆಯ ಗದಗ ಜಿಲ್ಲಾ ಹಿರಿಯ ನಿರ್ದೇಶಕ ಡಾ ಯೋಗೀಶ್ ಎ ರವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು ಗ್ರಾಮಗಳು ಕೆರೆ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಾಬ್ದಾರಿ, ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವೀರೇಂದ್ರ ಹೆಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರು ಕೆರೆ ಸಂರಕ್ಷಣೆಯ ಮೂಲಕ ರಾಜ್ಯದಲ್ಲಿ ಈಗಾಗಲೇ 560 ಕೆರೆಗಳ ಕಾಮಗಾರಿ ನೆರವೇರಿಸಿದ್ದಾರೆ. ಇದು ಅವರ ರಾಜ್ಯದಲ್ಲಿ ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡಿದ ಕಾರ್ಯಕ್ರಮವಾಗಿದೆ.
ದುಂದೂರು ಗ್ರಾಮದ ಕೆರೆಯನ್ನು ಗ್ರಾಮಸ್ಥರು, ರೈತರು, ಸಮಿತಿ ಸದಸ್ಯರು, ಪಂಚಾಯಿತಿ ಹಾಗೂ ಎಲ್ಲರ ಸಹಕಾರದಿಂದ ಒಳ್ಳೆಯ ರೀತಿಯ ಅಭಿವೃದ್ಧಿ ಪಡಿಸೋಣ ಎಂದರು. ಕಾರ್ಯಕ್ರಮಅಧ್ಯಕ್ಷತೆಯನ್ನು ಮೇಲಗಿರಿಗೌಡ ಪಾಟೀಲ್ ವಹಿಸಿದ್ದರು.
ಗ್ರಾಮದ ಪ್ರಮುಖರಾದ ರಾಜುಗೌಡ ಪಾಟೀಲ್, ಈಶ್ವರ ಗೌಡ ಕುಲಕರ್ಣಿ, ಹನುಮಂತಗೌಡ ಪಾಟೀಲ್, ನಿಂಗನಗೌಡ ಪಾಟೀಲ್, ಪ್ರಭುಗೌಡ ಪಾಟೀಲ್, ಶಿವಪ್ಪ ಓಲೆಕಾರ್, ನವಲಗುಂದ ಅಣ್ಣಿಗೇರಿ ತಾಲೂಕಿನ ಯೋಜನಾಧಿಕಾರಿ ದಿನೇಶ್ ಸೇರಿಗಾರ್, ಕೃಷಿ ಮೇಲ್ವಿಚಾರಕ ಶಂಕರ್ ಅರಗೊಳ, ಶ್ರೀಕುಮಾರ್, ಶಶಿಕಲಾ ಇತರರು ಉಪಸ್ಥಿತರಿದ್ದರು.