ಹಲವು ಮುಖಂಡರು ಜೆಡಿಎಸ್ ಸೇರ್ಪಡೆ
ರಾಮನಗರ,ಏ.೨೩-ನಗರದ ಜೆಡಿಎಸ್ ಕಚೇರಿಯಲ್ಲಿ ಕಾಂಗ್ರೆಸ್‌ನ ಮುಖಂಡರು, ಬುಡಕಟ್ಟು, ಅಲೆಮಾರಿ ಸಮುದಾಯಗಳ ಸಂಘಟನೆಗಳ ಪದಾಧಿಕಾರಿಗಳು ಪಕ್ಷ ತೊರೆದು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಅಂಜನಾಪುರ ವಾಸು, ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೊತ್ತಿಪುರ ಗೋವಿಂದರಾಜು ನೇತೃತ್ವದಲ್ಲಿ ಭಾನುವಾರ ಜೆಡಿಎಸ್ ಸೇರ್ಪಡೆಗೊಂದರು.
ಸೇರ್ಪಡೆಗೊಂಡವರು : ಕರ್ನಾಟಕ ಅಲೆಮಾರಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ನರಸಿಂಹಯ್ಯ, ಆದಿವಾಸಿ ಯುವಪಡೆಯ ಜಿಲ್ಲಾಧ್ಯಕ್ಷ ಶಿವರಾಜು, ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಬೈರಲಿಂಗಯ್ಯ,ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾಧ್ಯಕ್ಷ ಅಶೋಕ್, ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ವೆಂಕಟೇಶ್, ಮೇದಾರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಲೋಕೇಶ್, ಬೀಮ್ ಜಿಲ್ಲಾ ಉಪಾಧ್ಯಕ್ಷ ಕಾಂತರಾಜು, ಸೇರಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಜೆಡಿಎಸ್ ಸೇರ್ಪಡೆಗೊಂಡರು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಉಮೇಶ್, ರಾಜ್ಯ ವಕ್ತಾರ ನರಸಿಂಹಮೂರ್ತಿ,ನಗರಸಭೆ ಸದಸ್ಯ ರಮೇಶ್, ಮುಖಂಡರಾದ ಸಬ್ಬಕೆರೆ ಶಿವಲಿಂಗಯ್ಯ, ಜಯಕುಮಾರ್, ಶಂಭೇಗೌಡ, ಕೆಂಪರಾಜು, ಗಿರಿಯಪ್ಪ ಇದ್ದರು.