ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ:ಏ.22:ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದಿಂದ ಆಳಂದ ಮುಖ್ಯ ರಸ್ತೆಯವರೆಗೆ “ಎತ್ತಿನ ಬಂಡಿ”ಗಳ ಮೂಲಕ ಹಮ್ಮಿಕೊಳ್ಳಲಾದ ಮತದಾರರ ಜಾಗೃತಿ ಅಭಿಯಾನಕ್ಕೆ ಪಟ್ಟಣ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಭಂವರಸಿಂಗ್ ಮೀನಾ ಅವರು ಸೋಮವಾರ ಚಾಲನೆ ನೀಡಿದರು.