ನೇಹಾ ಹತ್ಯೆ: ಡಾ.ಸುಜಾತಾ ಖಂಡನೆ
ಕಲಬುರಗಿ,ಏ.22-ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಘಟನೆಯನ್ನು ಹಿರಿಯ ರಂಗಕರ್ಮಿ ಡಾ.ಸುಜಾತಾ ಜಂಗಮಶೆಟ್ಟಿ ಉಗ್ರವಾಗಿ ಖಂಡಿಸಿದ್ದಾರೆ.
ಈ ಘಟನೆ ವಿದ್ಯಾರ್ಥಿ ಸಮುದಾಯದಲ್ಲಿ ಆತಂಕ ಹೆಚ್ಚಿಸುವಂತೆ ಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿನ ಎಲ್ಲ ಕಾಲೇಜು, ಶಾಲೆ, ವಿಶ್ವವಿದ್ಯಾಲಯಗಳಲ್ಲಿ ಶಸ್ತ್ರ ಸಜ್ಜಿತ ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಇಂಥ ಘಟನೆಗಳು ಮತ್ತೆ ಮರುಕಳಿಸಬಾರದೆಂದರೆ ಕಠಿಣ ಕಾನೂನನ್ನು ರೂಪಿಸಬೇಕು, ಬರ್ಬರ ಕೊಲೆ ನಡೆದ 3 ತಿಂಗಳೋಳಗೆ ಅಪರಾಧಿಗೆ ಗಲ್ಲು ಶಿಕ್ಷೆಯಾಗುವ ವ್ಯವಸ್ಥೆ ಕಲ್ಪಿಸಬೇಕು. ಆಗ ಮಾತ್ರ ಇಂಥ ಘಟನೆಗಳು ಮಾರುಕಲಿಸುವುದಿಲ್ಲ ಎಂದು ತಿಳಿಸಿದ್ದಾರೆ.