ಅಕ್ರಮ ಮದ್ಯ ಮಾರಾಟ: ಓರ್ವನ ಬಂಧನ
ಕಲಬುರಗಿ,ಏ.22-ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಪಾಳಾ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಘಟಕದ ಪಿಐ ಪುಲ್ಲಯ್ಯ ಹಾಗೂ ಸಿಬ್ಬಂದಿ ದಾಳಿ ನಡೆಸಿ ಶರಣಪ್ಪ ಹರವಾಳ ಎಂಬಾತನನ್ನು ಬಂಧಿಸಿ 2913 ರೂ.ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಎಎಸ್‍ಐ ಸೈಯದ್ ಆಯ್ಯುಬ್ ಅವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.